ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Update: 2018-10-14 17:16 GMT

ಅಮಾಸೆಬೈಲು, ಅ.14: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮಾಸೆಬೈಲು ಗ್ರಾಮದ ಜಡ್ಡಿನಗದ್ದೆ ಎಂಬಲ್ಲಿ ನಡೆದಿದೆ.

ಮೃತರನ್ನು ಜಡ್ಡಿನಗದ್ದೆಯ ಗೋವಿಂದ ನಾಯ್ಕ ಎಂಬವರ ಮಗ ಗಣೇಶ ನಾಯ್ಕ(33) ಎಂದು ಗುರುತಿಸಲಾಗಿದೆ.

ಅವರು ಅ.10ರಂದು ಮನೆಯ ಅಂಗಳದಲ್ಲಿ ಗದ್ದೆಗೆ ಸಿಂಪಡಿಸುವ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಇವರು ಅ.13ರಂದು ಮಧ್ಯಾಹ್ನ ವೇಳೆ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಈ ಬಗ್ಗೆ ಅಮಾಸೆಬೈಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News