ಪೆಟ್ರೋಲ್ ಲೀಟರ್ ಗೆ 82.72 ರೂ. !

Update: 2018-10-14 17:39 GMT

ಹೊಸದಿಲ್ಲಿ, ಅ.14: ಪೆಟ್ರೋಲ್, ಡೀಸೆಲ್ ಬೆಲೆಯೇರಿಕೆ ರವಿವಾರವೂ ಮುಂದುವರಿದಿದ್ದು ಗ್ರಾಹಕರಿಗೆ ಮತ್ತಷ್ಟು ಹೊರೆ ಬಿದ್ದಿದೆ . ರವಿವಾರ ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 82.72 ರೂ, ಡೀಸೆಲ್ ಬೆಲೆ ಲೀಟರ್‌ಗೆ 75.38 ರೂ.ಗೆ ತಲುಪಿದೆ.

ಮುಂಬೈಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 88.18 ರೂ, ಡೀಸೆಲ್ ಬೆಲೆ ಲೀಟರ್‌ಗೆ 79.02 ರೂ, ಚೆನ್ನೈಯಲ್ಲಿ ಕ್ರಮವಾಗಿ 85.99 ರೂ. ಮತ್ತು 79.71 ರೂ. , ಕೋಲ್ಕತಾದಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 84.54 ರೂ, ಡೀಸೆಲ್ ಬೆಲೆ ಲೀಟರ್‌ಗೆ 77.23 ರೂ.ಗೆ ತಲುಪಿದೆ. ಕಳೆದ ಕೆಲ ತಿಂಗಳಿಂದ ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚುತ್ತಲೇ ಇದ್ದು ಬೆಲೆ ನಿಯಂತ್ರಣಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿಪಕ್ಷಗಳು ಸರಕಾರದ ಮೇಲೆ ಟೀಕಾ ಪ್ರಹಾರ ನಡೆಸಿವೆ. ಆದರೆ ಕಚ್ಛಾ ತೈಲ ಬೆಲೆಯಲ್ಲಿ ನಿರಂತರ ಹೆಚ್ಚಳ ಹಾಗೂ ಇತರ ಅಂತರಾಷ್ಟ್ರೀಯ ವಿದ್ಯಮಾನಗಳು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯಲ್ಲಿ ಹೆಚ್ಚಳವಾಗಲು ಕಾರಣ ಎಂಬ ಹೇಳಿಕೆಯನ್ನೇ ಸರಕಾರ ಪುನರುಚ್ಚರಿಸುತ್ತಿದೆ ಎಂದು ವಿಪಕ್ಷಗಳು ಟೀಕಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News