ರಸ್ತೆ ಅಪಘಾತ : ಯುವತಿ ಮೃತ್ಯು

Update: 2018-10-14 17:57 GMT

 ಬೆಂಗಳೂರು, ಅ.14: ಕಾರಿನ ಹಿಂಬದಿಗೆ ಬೈಕ್‌ಯೊಂದು ಢಿಕ್ಕಿ ಹೊಡೆದ ಪರಿಣಾಮ ಪರಿಣಾಮ ಯುವತಿಯೊಬ್ಬಕೆ ಮೃತಪಟ್ಟಿರುವ ದುರ್ಘಟನೆ ಇಲ್ಲಿನ ಕೆ.ಎಸ್.ಲೇಔಟ್ ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

ತಮಿಳುನಾಡಿನ ಹೊಸೂರು ನಿವಾಸಿ ರೂಪಾ (19) ಮೃತಪಟ್ಟ ಎಂದು ಪೊಲೀಸರು ಗುರುತಿಸಿದ್ದಾರೆ. ಶನಿವಾರ ಸಂಜೆ ಮಾಗಡಿಯಲ್ಲಿರುವ ಸಂಬಂಧಿಕರ ಮನೆಗೆ ಬಂದು ಬೆಳಗ್ಗಿನ ಜಾವ ಬೈಕ್‌ನಲ್ಲಿ ಹೊಸೂರಿಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ರವಿವಾರ ಬೆಳಗ್ಗಿನ ಜಾವ 2:30ರ ಸುಮಾರಿಗೆ ನೈಸ್ ರಸ್ತೆಯ ಸೋಂಪುರ ಕೆರೆಯ ಬಳಿ ಮುಂದೆ ಹೋಗುತ್ತಿದ್ದ ಕಾರಿಗೆ ಬೈಕ್ ವೇಗವಾಗಿ ಬಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್‌ನ ಹಿಂದೆ ಕುಳಿತಿದ್ದ ರೂಪಾ ರಸ್ತೆ ಮೇಲೆ ಬಿದ್ದು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರನಿಗೂ ಗಾಯಗಳಾಗಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಕೆ.ಎಸ್.ಲೇಔಟ್ ಸಂಚಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News