ಉಡುಪಿ: ದಕ್ಷಿಣ ಭಾರತ ಅಂತರ್ ವಿವಿ ಮಟ್ಟದ ಮಹಿಳೆಯರ ಖೋಖೋ ಪಂದ್ಯಾಟಕ್ಕೆ ಚಾಲನೆ

Update: 2018-10-15 12:18 GMT

ಉಡುಪಿ, ಅ.15: ಮಂಗಳೂರು ವಿಶ್ವವಿದ್ಯಾನಿಲಯ, ಅಜ್ಜರಕಾಡು ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಭಾರತೀಯ ವಿಶ್ವವಿದ್ಯಾನಿಲಯಗಳ ಸಂಘದ ನೇತೃತ್ವದಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿರುವ ನಾಲ್ಕು ದಿನಗಳ ಆರು ರಾಜ್ಯಗಳ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಖೋಖೋ ಚಾಂಪಿಯನ್‌ ಶಿಪ್‌ಗೆ ಇಂದು ಚಾಲನೆ ನೀಡಲಾಯಿತು.

ಕ್ರೀಡಾಕೂಟವನ್ನು ಉದ್ಘಾಟಿಸಿದ ಉಡುಪಿ ಜಿಪಂ ಮುಖ್ಯಕಾರ್ಯನಿರ್ವ ಹಣಾಧಿಕಾರಿ ಶಿವಾನಂದ ಕಾಪಶಿ ಮಾತನಾಡಿ, ಕ್ರೀಡೆಯಲ್ಲಿ ಕೇವಲ ಗೆಲ್ಲು ವುದು ಮಾತ್ರವಲ್ಲ, ಭಾಗವಹಿಸಿ ಉತ್ತಮ ಪ್ರದರ್ಶನ ನೀಡುವುದು ಕೂಡ ಅಷ್ಟೆ ಮುಖ್ಯವಾಗಿದೆ. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಸಂಸ್ಕೃತಿ ಹಾಗೂ ಪರಂಪರೆ ಯನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಬಂರಗಿ ಮಾತನಾಡಿ, ಕೆಲವು ಶಾಲಾಕಾಲೇಜುಗಳಲ್ಲಿ ಮೈದಾನಗಳಿಲ್ಲದೆ ಮಕ್ಕಳು ವಿಡಿಯೋ ಗೇಮ್ ಗಳ ದಾಸರಾಗಿ ಕ್ರೀಡಾ ಚಟುವಟಿಕೆಗಳಿಂದ ದೂರ ಉಳಿಯುತ್ತಿದ್ದಾರೆ. ಇದ ರಿಂದ ಮಕ್ಕಳಲ್ಲಿ ದೈಹಿಕ ಸಾಮರ್ಥ್ಯ ಕಡಿಮೆ ಆಗುತ್ತಿದೆ. ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯದಲ್ಲಿ ಸಮಾತೋಲನ ಕಾಯ್ದುಕೊಂಡರೆ ಮಾತ್ರ ಮಕ್ಕಳ ಪರಿ ಪೂರ್ಣ ಬೆಳವಣಿಗೆ ಸಾಧ್ಯವಾಗುತ್ತದೆ. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿ ಗಳನ್ನು ದುಶ್ಚಟಗಳಿಂದ ದೂರ ಇರುವಂತೆ ಮಾಡುತ್ತದೆ ಎಂದರು.

ಯೂರೋಪಿನ ಕೆಲವೇ ದೇಶಗಳಿಗೆ ಸೀಮಿತವಾಗಿದ್ದ ಐಸ್ ಹಾಕಿಯನ್ನು ಅಂತಾರಾಷ್ಟ್ರೀಯ ಕ್ರೀಡೆಯನ್ನಾಗಿ ಮಾಡಿದಂತೆ ಖೋಖೋ ಸೇರಿದಂತೆ ಭಾರತದ ಹಲವು ಗ್ರಾಮೀಣ ಕ್ರೀಡೆಗಳಿಗೆ ಮಹತ್ವ ನೀಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿ ಒಲಂಪಿಕ್ಸ್‌ಗೆ ಸೇರಿಸುವ ಪ್ರಯತ್ನ ಆ ಬೇಕು ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಮಂಗಳೂರು ವಿವಿಯ ಉಪಕುಲಾಧಿಪತಿ ಡಾ.ಕಿಶೋರ್ ಕುಮಾರ್ ಸಿ.ಕೆ. ವಹಿಸಿದ್ದರು. ವೇದಿಕೆಯಲ್ಲಿ ಸಂಚಲನ ಟ್ರಸ್ಟ್‌ನ ಪ್ರೇಮ್ ಪ್ರಸಾದ್ ಶೆಟ್ಟಿ, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ, ಪಂದ್ಯಾಟದ ಮುಖ್ಯ ತಂತ್ರಜ್ಞರಾದ ಸತ್ಯನಾರಾಯಣ, ನಟರಾಜ್, ಮಂಗಳೂರು ವಿವಿಯ ದೈಹಿಕ ಶಿಕ್ಷಣದ ಉಪನಿರ್ದೇಶಕ ಜೆರಾಲ್ಡ್ ಸಂತೋಷ್ ಡಿಸೋಜ, ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ವೇಣು ಗೋಪಾಲ್, ಅಜ್ಜರಕಾಡು ಮಹಿಳಾ ಸರಕಾರಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್. ಸ್ವಾಗತಿಸಿದರು. ಸೋಜನ್ ಕೆ.ಜಿ. ವಂದಿಸಿದರು. ಸತೀಶ್ ಬೆಂಗಳೂರು ಕಾರ್ಯಕ್ರಮ ನಿರೂ ಪಿಸಿದರು. ಈ ಪಂದ್ಯಾಟದಲ್ಲಿ ಕರ್ನಾಟಕ, ಆಂಧ್ರಪ್ರದೇಶ, ಪಾಂಡಿಚೇರಿ, ತೆಲಂಗಾಣ, ಕೇರಳ, ತಮಿಳುನಾಡು ರಾಜ್ಯಗಳ ಒಟ್ಟು 56 ವಿಶ್ವವಿದ್ಯಾನಿಲಯ ಗಳ ತಂಡಗಳು ಭಾಗವಹಿಸಿವೆ. ಎರಡು ಹೊನಲು ಬೆಳಕಿನ ಸೇರಿದಂತೆ ಒಟ್ಟು ನಾಲ್ಕು ಅಂಕಣಗಳಲ್ಲಿ ಪಂದ್ಯಾಟಗಳು ನಡೆಯಲಿವೆ.

10ರಲ್ಲಿ ಮಂಗಳೂರು ವಿವಿ ಮಂಗಳೂರು ವಿವಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು, ದೇಶದ 700 ವಿವಿಗಳ ಪೈಕಿ ಮಂಗಳೂರು ವಿವಿಯು ಕ್ರೀಡೆಯಲ್ಲಿ ಟಾಪ್ 10ರೊಳಗೆ ಇದೆ. ಪದಕ ವಿಜೇತ ಕ್ರೀಡಾ ವಿದ್ಯಾರ್ಥಿಗಳಿಗೆ 30ಸಾವಿರ ನಗದು ಬಹುಮಾನ ನೀಡ ಲಾಗುತ್ತದೆ. ಪ್ರತಿ ತಿಂಗಳು 75 ಕ್ರೀಡಾ ವಿದ್ಯಾರ್ಥಿಗಳಿಗೆ 1500ರೂ. ಸಹಾಯ ಧನ ನೀಡಲಾಗುತ್ತಿದೆ ಎಂದು ಮಂಗಳೂರು ವಿವಿಯ ಉಪ ಕುಲಾಧಿಪತಿ ಡಾ.ಕಿಶೋರ್ ಕುಮಾರ್ ಸಿ.ಕೆ. ತಿಳಿಸಿದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News