ಕಾಂಗ್ರೆಸ್ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಸಂಪೂರ್ಣ ಶರಣಾಗಿಲ್ಲ: ಡಿಸಿಎಂ ಪರಮೇಶ್ವರ್

Update: 2018-10-15 14:10 GMT

ಬೆಂಗಳೂರು, ಅ. 15: ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಮಂಡ್ಯ, ರಾಮನಗರ ಹಾಗೂ ಶಿವಮೊಗ್ಗ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಅಸಮಾಧಾನಗೊಂಡಿರುವುದು ಸತ್ಯ. ಆದರೆ, ಒಳ್ಳೆಯ ಉದ್ದೇಶಕ್ಕಾಗಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿನ ತನ್ನ ಕಚೇರಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಚೆಲುವರಾಯಸ್ವಾಮಿ, ಮಾಜಿ ಶಾಸಕ ಬಾಲಕೃಷ್ಣ ಅವರು ಪಕ್ಷದ ಸಿದ್ಧಾಂತಕ್ಕೆ ಒಪ್ಪಿ ಬಂದಿದ್ದಾರೆ. ಬಿಜೆಪಿಗೆ ಹೋಗುವ ಮಾಹಿತಿ ನನಗೆ ಗೊತ್ತಿಲ್ಲ ಎಂದು ಹೇಳಿದರು.

ಚೆಲುವರಾಯಸ್ವಾಮಿಯೊಬ್ಬರಿಗೆ ಅಸಮಾಧಾನವಲ್ಲ, ಕಾರ್ಯಕರ್ತರು ಸೇರಿ ಅನೇಕರಿಗೆ ಅಸಮಾಧಾನವಿದೆ. ಆದರೆ ಮೈತ್ರಿ ಸರಕಾರ ಇರುವುದರಿಂದ ಹೊಂದಾಣಿಕೆ ಅನಿವಾರ್ಯ ಎಂದ ಅವರು, ಇದೊಂದು ರಾಜಕೀಯ ರಣತಂತ್ರವಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಯಾವುದೇ ಕಾರಣಕ್ಕೂ ಜೆಡಿಎಸ್‌ಗೆ ಸಂಪೂರ್ಣ ಶರಣಾಗಿಲ್ಲ. ಇದು ಚುನಾವಣಾ ರಣನೀತಿ. ವಿ.ಎಸ್.ಉಗ್ರಪ್ಪ ಅವರಿಗೆ ಬಳ್ಳಾರಿ ಟಿಕೆಟ್ ನೀಡಲಾಗಿದೆ ಎಂದರು. ಶಿವಮೊಗ್ಗದಲ್ಲಿ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಿದ್ದೇವೆ ಎಂದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಾಮರ್ಥ್ಯ ಗೊತ್ತಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News