ಆತ್ಮಹತ್ಯೆಗೆ ಯತ್ನ ಪ್ರಕರಣ: ಆರೋಗ್ಯ ಸಹಾಯಕರ ಸಂಘ ಖಂಡನೆ

Update: 2018-10-15 15:15 GMT

ಉಡುಪಿ, ಅ.15: ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ನಾಗರಾಜ್ ಅವರು ಅಲ್ಲಿನ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ್ ಐತಾಳ್‌ರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆಯನ್ನು ಕರ್ನಾಟಕ ರಾಜ್ಯದ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾ ರಕರ ಕೇಂದ್ರ ಸಂಘದ ಉಡುಪಿ ಜಿಲ್ಲಾ ಶಾಖೆ ತೀವ್ರವಾಗಿ ಖಂಡಿಸಿದೆ. ಈ ಘಟನೆಗೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂಘವು ಮೇಲಾಧಿಕಾರಿಗಳನ್ನು ಒತ್ತಾಯಿಸಿದೆ.

ಈ ಘಟನೆಯನ್ನು ಖಂಡಿಸಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆ, ಈ ಬಗ್ಗೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಯವರು ನಿಷ್ಪಕ್ಷಪಾತವಾದ ಸೂಕ್ತ ತನಿಖೆ ನಡೆಸಿ ಸಂತ್ರಸ್ತ ನೌಕರರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಸಂಘದ ಜಿಲ್ಲಾಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಆಗ್ರಹಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News