ಲಿಫ್ಟ್ ಕೇಳಿದ ಮಹಿಳೆಯ ಅತ್ಯಾಚಾರಗೈದು ಹತ್ಯೆ

Update: 2018-10-15 16:38 GMT

ಪಣಜಿ, ಅ. 15: ಪಣಜಿಯಿಂದ 10 ಕಿ.ಮೀ. ದೂರದಲ್ಲಿರುವ ಹಳೇ ಗೋವಾ ವಿಲೇಜ್‌ನಲ್ಲಿ ಮಧ್ಯವಯಸ್ಸಿನ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಆರೋಪದಲ್ಲಿ ಕರ್ನಾಟಕ ಮೂಲದ 23 ವಯಸ್ಸಿನ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಳೇ ಗೋವಾದಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಬಳಿಕ ಶನಿವಾರ ರಾತ್ರಿ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಯುವಕ ಮಂಜುನಾಥ ದೊಡ್ಮನಿ ಕರ್ನಾಟಕದ ಬೆಳಗಾವಿ ಜಿಲ್ಲೆಯವರು. ಅವರು ಗೋವಾದಲ್ಲಿ ತನ್ನ ಹೆತ್ತವರೊಂದಿಗೆ ವಾಸಿಸುತ್ತಿದ್ದಾರೆ. ಆತನನ್ನು ಶನಿವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ (ಉತ್ತರ) ಚಂದನ್ ಚೌಧುರಿ ಹೇಳಿದ್ದಾರೆ.

ಲಿಫ್ಟ್ ಕೇಳಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಅನಂತರ ಕತ್ತು ಹಿಸುಕಿ ಹತ್ಯೆಗೈದಿರುವುದನ್ನು ಮಂಜುನಾಥ ಒಪ್ಪಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ಮೃತದೇಹದ ಮರಣೋತ್ತರ ಪರೀಕ್ಷೆ ಅತ್ಯಾಚಾರ ಹಾಗೂ ಕೊಲೆಯನ್ನು ದೃಢಪಡಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News