ಡಿಸಿಎಂ ಪರಮೇಶ್ವರ್ ರನ್ನು ಭೇಟಿ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ಮರಿಮೊಮ್ಮಗ

Update: 2018-10-15 17:10 GMT

ಬೆಂಗಳೂರು, ಅ. 15: ಸಂವಿಧಾನ ಬದಲಿಸುವ ಹೇಳಿಕೆಗಳನ್ನು ವಿರೋಧಿಸಿ ದೇಶದೆಲ್ಲೆಡೆ ಹೋರಾಟ ಮಾಡಲು ಮುಂದಾಗಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ನಿಲುವಿಗೆ ನಮ್ಮ ಬೆಂಬಲವಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಸೋಮವಾರ ವಿಧಾನಸೌಧಕ್ಕೆ ಆಗಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿಮೊಮ್ಮಗ ರಾಜರತ್ನ ಅಂಬೇಡ್ಕರ್, ಪರಮೇಶ್ವರ್ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪರಮೇಶ್ವರ್, ಮೊದಲ ಬಾರಿ ಇವರನ್ನು ಭೇಟಿ ಮಾಡಿದ್ದು ಸಂತಸ ತಂದಿದೆ ಎಂದರು.

ಇತ್ತೀಚೆಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ಕೇಳಿ ಬರುತ್ತಿರುವುದಕ್ಕೆ ಬೇಸರ ಮೂಡಿಸಿದೆ. ಇದೇ ಸಂದರ್ಭದಲ್ಲಿ ಸಂವಿಧಾನ ಬದಲಾವಣೆ ವಿರೋಧಿಸಿ ಹೋರಾಟ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದರು. ಈ ವೇಳೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News