ಅ.28ರ ದತ್ತಮಾಲ ಅಭಿಯಾನ ಪೂರ್ವಭಾವಿ ಸಭೆ: ದತ್ತ ಪೀಠದಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಡಿಸಿ ಸೂಚನೆ

Update: 2018-10-15 18:21 GMT

ಚಿಕ್ಕಮಗಳೂರು, ಅ.15: ದತ್ತಮಾಲಾ ಅಭಿಯಾನದ ಹಿನ್ನಲೆ ಐ.ಡಿ ಪೀಠಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ದತ್ತಮಾಲ ಅಭಿಯಾನ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಕ್ಟೋಬರ್ 28 ರಂದು ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನ ಕಾರ್ಯಕ್ರಮಕ್ಕೆ ಹಿಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿಲಿದ್ದಾರೆ. ಅವರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ತಿಳಿಸಿದರು.

ದತ್ತಮಾಲಾ ಅಭಿಯಾನ ಕಾರ್ಯಕ್ರಮದ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಆಗುಂತೆ ನೋಡಿಕೊಳ್ಳಬೇಕೆಂದು ಮೆಸ್ಕಾಂ ಅಧಿಕಾರಿಗಳು ಸೂಚನೆ ನೀಡಿದರು. ನಗರದಿಂದ ಐ.ಡಿ ಪೀಠಕ್ಕೆ ಹೋಗುವ ರಸ್ತೆಯ ವಾಹನ ಸುಗಮ ಸಂಚಾರಕ್ಕೆ ಯೋಗ್ಯ ರೀತಿಯಲ್ಲಿರುವಂತೆ ಅಗತ್ಯ ದುರಸ್ಥಿ ಕಾರ್ಯಗಳನ್ನು ಕೈಗೊಳ್ಳಬೇಕೆಂದು ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುನ್ನೆಚ್ಚರಿಕೆ ಕ್ರಮವಾಗಿ ಒಂದು ಕ್ರೇನನ್ನು ಐ.ಡಿ ಪೀಠಕ್ಕೆ ಚಾಲಕರೊಂದಿಗೆ ನಿಯೋಜಿಸುವುದು ಹಾಗೂ ಭಕ್ತಾಧಿಗಳ ಅಗತ್ಯಕ್ಕೆ ತಕ್ಕಂತೆ ಬಸ್ ಸಂಪರ್ಕ ಒದಗಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ತಾತ್ಕಾಲಿಕ ಆಸ್ಪತ್ರೆಯನ್ನು ತೆರೆದು ಚಿಕಿತ್ಸೆಗೆ ಅಗತ್ಯ ಔಷಧಿ ಸೇರಿದಂತೆ ಅಂಬುಲೆನ್ಸಿನ ವ್ಯವಸ್ಥೆ ಮಾಡಬೇಕು ಹಾಗೂ ವೈದ್ಯಾಧಿಕಾರಿಗಳನ್ನು ನಿಯೋಜನೆ ಮಾಡಬೇಕೆಂದರು. ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯವಿರುವ ಪೊಲೀಸ್ ಬಂದೋಬಸ್ತ್ ನಿಯೋಜಿಸಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಅಣ್ಣಾಮಲೈ ಅಪರ ಜಿಲ್ಲಾಧಿಕಾರಿ ಶಿವಕುಮಾರ್ ತಹಶೀಲ್ದಾರ್ ಸಂದಕುಮಾರ್, ಶ್ರೀ ರಾಮಸೇನೆಯ ಮುಖಂಡರುಗಳು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News