ನ.12ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಅದಾಲತ್: ಸಚಿವ ಯು.ಟಿ.ಖಾದರ್

Update: 2018-10-16 07:38 GMT

ಮಂಗಳೂರು, ಅ.16: ಆರ್‌ಟಿಸಿಯಲ್ಲಿನ ಕೆಲವೊಂದು ಲೋಪದೋಷಗಳಿಂದಾಗಿ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಏಕಮಾತ್ರದಲ್ಲಿ ಸಹಾಯಕ ಆಯುಕ್ತರ ಮಟ್ಟದಲ್ಲಿ ಪರಿಹಾರ ಒದಗಿಸಲು ನವೆಂಬರ್ 12ರಂದು ಜಿಲ್ಲಾ ಮಟ್ಟದ ಕಂದಾಯ ಅದಾಲತ್ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ತಿಳಿಸಿದರು.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಪರಿವರ್ತನೆ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಜಿಲ್ಲಾ ಮಟ್ಟದಲ್ಲಿ ಅರ್ಥ ಮಾಡಿಕೊಂಡು ಶಾಶ್ವತ ಪರಿಹಾರ ಒದಗಿಸಲು ಈಗಾಗಲೇ ಕಂದಾಯ ಸಚಿವರು, ನಗರಾಭಿವೃದ್ಧಿ ಕಾರ್ಯದರ್ಶಿ ಹಾಗೂ ನನ್ನ ಉಪಸ್ಥಿತಿಯಲ್ಲಿ ಸಭೆ ನಡೆದಿದೆ. ಆರ್‌ಟಿಸಿಯಲ್ಲಿನ ಕೆಲವೊಂದು ಸಮಸ್ಯೆಗಳಿಂದಾಗಿ ಜನರು ಭೂ ಪರಿವರ್ತನೆ ಸೇರಿದಂತೆ ಕಂದಾಯ ಇಲಾಖೆಯ ಹಲವಾರು ಸಮಸ್ಯೆಗಳಿಗೆ ಈ ಅದಾಲತ್‌ನಲ್ಲಿ ನೇರ ಸ್ಥಳದಲ್ಲೇ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು. ಮಾತ್ರವಲ್ಲದೆ ತಾಲೂಕು ಮಟ್ಟದಲ್ಲಿಯೂ ಕಂದಾಯ ಅದಾಲತ್ ನಡೆಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪ್ರತಿ ತಾಲೂಕಿನಲ್ಲಿ ಸಹಾಯಕ ಆಯುಕ್ತರು, ತಹಶೀಲ್ದಾರ್, ಸರ್ವೆಯರ್ ನೇತೃತ್ವದಲ್ಲಿ ಸಮಿತಿ ಮಾಡಿ ಆರ್‌ಟಿಸಿಯಲ್ಲಿನ ಸಮಸ್ಯೆಯನ್ನು 45 ದಿನಗಳಲ್ಲಿ ಸರಿಪಡಿಸಲು ನಿರ್ದೇಶಿಸಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News