ಭಾರೀ ಮಳೆ: ಖೋಖೋ ಪಂದ್ಯಾಟ ಸ್ಥಳಾಂತರ
Update: 2018-10-16 20:01 IST
ಉಡುಪಿ, ಅ.16: ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಯಲ್ಲಿ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿ ರುವ ಆರು ರಾಜ್ಯಗಳ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಮಹಿಳೆಯರ ಖೋಖೋ ಪಂದ್ಯಾಟವನ್ನು ಅಜ್ಜರಕಾಡುವಿನಲ್ಲಿ ನಿರ್ಮಾಣ ಹಂತ ದಲ್ಲಿರುವ ಲಾನ್ ಟೆನ್ನಿಸ್ ಒಳಾಂಗಣ ಕ್ರೀಡಾಂಗಣಕ್ಕೆ ಇಂದು ಸಂಜೆ ಸ್ಥಳಾಂತರಿಸಲಾಗಿದೆ.
ಒಳಾಂಗಣ ಕ್ರೀಡಾಂಗಣದಲ್ಲಿ ಒಂದು ಅಂಕಣವನ್ನು ನಿರ್ಮಿಸಿ ನಾಲ್ಕು ಫ್ರಿ ಕ್ವಾರ್ಟರ್ ಫೈನಲ್ ಪಂದ್ಯವನ್ನು ಆಡಿಸಲಾಗುತ್ತಿದೆ. ಮಳೆಯ ಹಿನ್ನೆಲೆಯಲ್ಲಿ ಸಂಜೆ ವೇಳೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಹೊನಲು ಬೆಳಕಿನಲ್ಲಿ ಪಂದ್ಯ ಗಳು ರಾತ್ರಿ 11ಗಂಟೆಯವರೆಗೂ ನಡೆಯಲಿದೆ ಎಂದು ಪಂದ್ಯಾಟದ ಸಂಚಾಲಕ ಡಾ. ರೋಶನ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.