×
Ad

ಉಡುಪಿ: ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

Update: 2018-10-16 20:15 IST

ಉಡುಪಿ, ಅ.16: 2014, 2015 ಮತ್ತು 2016ನೇ ಸಾಲಿನ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡುತ್ತಿರುವ ಸರಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಆನ್‌ಲೈನ್ ಮೂಲಕ ವಿದ್ಯಾರ್ಥಿವೇತನಕ್ಕಾಗಿ ತಮ್ಮ ವಿವರಗಳನ್ನು ನವೀಕರಿಸಿ ಶಾಲೆಗೆ ಸಲ್ಲಿಸಬೇಕಾಗಿದೆ.

2017ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಹೊಸದಾಗಿ ವಿವರಗಳನ್ನು ನಮೂದಿಸಿ ಸಂಸ್ಥೆಯ ಮುಖ್ಯಸ್ಥರಿಗೆ ಸಲ್ಲಿಸಬೇಕು. ಮುಖ್ಯಸ್ಥರು ಪರಿಶೀಲಿಸಿ ಮುಂದಿನ ಹಂತಕ್ಕೆ ಸಲ್ಲಿಸಲು ಸೂಚಿಸಲಾಗಿದೆ. ಸಂಸ್ಥೆಯ ಮುಖ್ಯಸ್ಥರು ಈ ಬಗ್ಗೆ ತಮ್ಮ ಸಂಸ್ಥೆಗಳಲ್ಲಿ ಈ ಹಿಂದೆ ಎನ್‌ಎಂಎಂಎಸ್ ಪರೀಕ್ಷೆಯಲ್ಲಿ ಉತ್ತೀರ್ಣ ರಾದ ವಿದ್ಯಾರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕ್ರಮ ವಹಿಸಬೇಕು.

ಅರ್ಜಿ ಸಲ್ಲಿಸಲು ಅ.31 ಕೊನೆಯ ದಿನವಾಗಿದೆ. ಈ ವರ್ಷದ ಎನ್‌ಎಂ ಎಂಎಸ್ ಹಾಗೂ ಎನ್‌ಟಿಎಸ್‌ಇ ಪರೀಕ್ಷೆಗಳು ನ.4ರಂದು ಎಲ್ಲಾ ವಲಯ ಗಳಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ನೋಡೆಲ್ ಅಧಿಕಾರಿ, ಉಡುಪಿ ಡಯಟ್ ಉಪನ್ಯಾಸಕ ಚಂದ್ರನಾಯ್ಕಾ (ಮೊ:9380241292) ಇವರನ್ನು ಸಂಪರ್ಕಿಸುವಂತೆ ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್‌ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News