ಹಿರಿಯಡ್ಕ: ದಿಕ್ಸೂಚಿ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ

Update: 2018-10-16 14:48 GMT

ಉಡುಪಿ, ಅ.16: ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ ಘಟಕ ಹಾಗೂ ಉದ್ಯೋಗ ಮಾಹಿತಿ ಘಟಕ ಸಹಯೋಗದೊಂದಿಗೆ ದಿಕ್ಸೂಚಿ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಕಾಲೇಜಿನ ಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಮಂಗಳೂರು ಸರ್ವಜ್ಞ ಐಎಎಸ್ ಅಕಾಡೆಮಿಯ ನಿರ್ದೇಶಕ ಸುರೇಶ್ ಎಂ.ಎಸ್. ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸತತ ಪ್ರಯತ್ನ ಹಾಗೂ ಪರೀಕ್ಷಾ ಕೌಶಲ್ಯಗಳ ಅಂತರಂಗೀಕರಣದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿದ್ಯಾರ್ಥಿಗಳು ಯಶಸ್ವಿಯಾಗಿ ಎದುರಿಸಲು ಸಾಧ್ಯ ಎಂದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ.ನಿಕೇತನ ವಹಿಸಿದ್ದರು. ಶಿಕ್ಷಕರೇ ಕಾಲೇಜಿನ ಸಂಪನ್ಮೂಲ ವ್ಯಕ್ತಿಗಳು. ಪ್ರತಿ ಬೋಧಕರಲ್ಲಿರುವ ವಿಷಯ ಜ್ಞಾನ ಕೌಶಲ್ಯವನ್ನು ಬಳಸಿ ಈ ಸ್ಪರ್ಧಾತ್ಮಕ ಪರೀಕ್ಷಾ ಜಗತ್ತಿಗೆ ವಿದ್ಯಾರ್ಥಿಳನ್ನು ಅಣಿಗೊಳಿಸಬೇಕು ಎಂದರು.

 ಬಿ.ಐಕ್ಯುಎಸಿ ಸಂಚಾಲಕಿ ಸುಮನಾ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾ ಡಿದರು. ಎನ್ನೆಸ್ಸೆಸ್ ಯೋಜನಾಧಿಕಾರಿ ಪ್ರವೀಣ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿನಿ ವಿಜಯಶ್ರೀ ಪೈ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News