ಕಳವು ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Update: 2018-10-16 17:36 GMT

ಮಂಗಳೂರು, ಅ.16: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಸಹಿತ ವಿವಿಧ ಠಾಣಾ ವ್ಯಾಪ್ತಿಯ ಕಳವು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ತೋಡಾರ್ ಹಿದಾಯತ್‌ವುಲ್ ನಗರ ನಿವಾಸಿ ಮುಹಮ್ಮದ್ ಫೈಝಲ್ ಯಾನೆ ತೋಡಾರ್ ಫೈಝಲ್ (28) ಬಂಧಿತ ಆರೋಪಿ.

ಮಂಗಳೂರು ಗ್ರಾಮಾಂತರ ಪೊಲೀಸರಿಗೆ ದೊರಕಿದ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ದಕ್ಷಿಣ ರೌಡಿ ನಿಗ್ರಹದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಆರೋಪಿ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆರು ಪ್ರಕರಣ, ವೇಣೂರು ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಕಾರ್ಕಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಒಳಗೊಂಡಂತೆ ಒಟ್ಟು ಒಂಬತ್ತು ಕಳವು ಪ್ರಕರಣಗಳು ದಾಖಲಾಗಿವೆ.

ಪತ್ತೆ ಕಾರ್ಯಾಚರಣೆಯನ್ನು ಮಂಗಳೂರು ಪೊಲೀಸ್ ಆಯುಕ್ತರ ಆದೇಶದಂತೆ ಅಪರಾಧ ಪತ್ತೆ ವಿಭಾಗದ ಪೊಲೀಸ್ ಉಪ ಆಯುಕ್ತರ ನಿರ್ದೇಶನದಂತೆ ಮಂಗಳೂರು ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಿದ್ದಗೌಡ ಭಜಂತ್ರಿ, ಪೊಲೀಸ್ ಉಪನಿರೀಕ್ಷಕ ವೆಂಕಟೇಶ್, ದಕ್ಷಿಣ ಉಪವಿಭಾಗ ರೌಡಿ ನಿಗ್ರಹ ದಳದ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News