​‘ಕಾಂಗ್ರೆಸ್-ಜೆಡಿಎಸ್ ಜಂಟಿ ಶಾಸಕಾಂಗ ಪಕ್ಷದ ಸಭೆಗೆ ಆಗ್ರಹ’

Update: 2018-10-16 18:24 GMT

ಬೆಂಗಳೂರು, ಅ.16: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರನ್ನು ಒಳಗೊಂಡ ಜಂಟಿ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯಗೆ ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ಪತ್ರ ಬರೆದಿದ್ದಾರೆ.

ಹೀಗೆಯೇ ಮೈತ್ರಿ ಸರಕಾರ ಸುಭದ್ರವಾಗಿ ಐದು ವರ್ಷಗಳ ಕಾಲ ಮುಂದುವರೆಯುವ ಆಶಾಭಾವನೆ ಜೊತೆಗೆ ಶಾಸಕರ ಕ್ಷೇತ್ರಾಭಿವೃದ್ಧಿಗೆ ಅನುದಾನ, ಅವರ ಕ್ಷೇತ್ರದ ಕುಂದುಕೊರತೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳ ಪರಿಣಾಮಕಾರಿ ಜಾರಿಗೆ ಮಾರ್ಗೋಪಾಯ ಕಂಡು ಹಿಡಿಯುವ ನಿಟ್ಟಿನಲ್ಲಿ ಒಂದು ಪೂರ್ಣ ದಿನದ ಜಂಟಿ ಶಾಸಕಾಂಗ ಸಭೆಯನ್ನು ಕೂಡಲೇ ಕರೆಯಬೇಕೆಂದು ಅರು ಮನವಿ ಮಾಡಿದ್ದಾರೆ.

ಇಂತಹ ಸಭೆಯಿಂದ ಎರಡು ಪಕ್ಷದ ಶಾಸಕರು ಮುಕ್ತವಾಗಿ ತಮ್ಮ ಕ್ಷೇತ್ರಗಳ ಸಮಸ್ಯೆಗಳನ್ನು ಹೇಳಿಕೊಳ್ಳಲು ಅವಕಾಶ ದೊರೆತು, ಅಭಿವೃದ್ಧಿಗೆ ಅನುಕೂಲವಾಗುವ ಮೂಲಕ ಹೊಸ ಮನ್ವಂತರಕ್ಕೆ ನಾಂದಿಯಾಗಲಿದೆ. ಇದರಿಂದ ಶಾಸಕರಲ್ಲಿ ಸರಕಾರ ಹಾಗೂ ತಮ್ಮ ಬಗ್ಗೆ ದೃಢ ವಿಶ್ವಾಸ ಹೆಚ್ಚಲಿದೆ ಎಂದು ರಘು ಆಚಾರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News