ಕೆರೆಗಳಿಗೆ ಕಲುಷಿತ ನೀರು ಸೇರದಂತೆ ಸೂಕ್ತ ಕ್ರಮ: ವಿಜಯ್‌ಶಂಕರ್

Update: 2018-10-16 18:38 GMT

ಬೆಂಗಳೂರು, ಅ.16: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಬಹುತೇಕ ಕೆರೆಗಳಿಗೆ ಕಲುಷಿತ ನೀರು ಸೇರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆಂದು ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹತ್ತು ಕೆರೆಗಳಲ್ಲಿ ಕಲುಷಿತ ನೀರು ಸೇರುತ್ತಿರುವುದರ ಬಗ್ಗೆ ವರದಿಗಳನ್ನು ತರಿಸಿಕೊಂಡಿದ್ದೇನೆ. ಕಲುಷಿತ ನೀರು ತಡೆಗೆ ಶೀಘ್ರವೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆರೆ ಅಭಿವೃದ್ಧಿ ಸಂಬಂಧ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಅಧಿಕಾರಿಗಳು ರಾಜ್ಯಸರಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ ಎರಡು ಬಾರಿ ಸಭೆ ನಡೆಸಲಾಗಿದೆ. ಕೆರೆಗಳನ್ನು ವೈಜ್ಞಾನಿಕವಾಗಿ ಅಭಿವೃದ್ಧಿಗೊಳಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದರು.

ಒತ್ತುವರಿಯಾಗಿರುವ ಕೆರೆಗಳ ತೆರವು ಕಾರ್ಯಾಚರಣೆ ಕೈಗೊಳ್ಳಲು ಮುಂದಾಗಿದ್ದು, ಬಿಬಿಎಂಪಿ, ಬಿಡಿಎ ಸೇರಿದಂತೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಆಯಾ ಇಲಾಖೆ ಆಧಿಕಾರಿಗಳೊಂದಿಗೆ ಸಮನ್ವಯ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಶಂಕರ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News