ಯಾವುದೇ ದೂರು ದಾಖಲಾಗಿಲ್ಲ ಪೊಲೀಸ್ ಆಯುಕ್ತ ಡಾ.ಎ.ಸುಬ್ರಮಣೇಶ್ವರ ರಾವ್ ಸ್ಪಷ್ಟನೆ

Update: 2018-10-16 18:42 GMT

ಮೈಸೂರು,ಅ.16: ಓಪನ್ ಸ್ಟ್ರೀಟ್ ಫೆಸ್ಟಿವಲ್ ನಲ್ಲಿ ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ನಗರ ಪೆÇಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರರಾವ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ತಮ್ಮ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿಯವರೆಗೂ ಈ ಸಂಭಂದವಾಗಿ ಯಾವುದೇ ದೂರು ದಾಖಲಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಓಪನ್ ಸ್ಟ್ರೀಟ್ ಫೆಸ್ಟಿವಲ್  ನಲ್ಲಿ ದೌರ್ಜನ್ಯವಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ದಿನ ಓಪನ್ ಸ್ಟ್ರೀಟ್ ಫೆಸ್ಟಿವಲ್ ನಲ್ಲಿ 150 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. 60 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಕೆ ಕೂಡ ಮಾಡಲಾಗಿತ್ತು. ಆದರೆ ಸಿಸಿ ಕ್ಯಾಮರಾದಲ್ಲೂ ಕೂಡ ಯಾವುದೇ ಆ ರೀತಿಯ ಚಟುವಟಿಕೆಗಳು ಕಂಡಿಲ್ಲ. ಸಿಸಿ ಕ್ಯಾಮೆರಾ ಫೂಟೇಜ್ ಗಳನ್ನು ಮಾನಿಟರ್ ಮಾಡುತ್ತಿದ್ದೇವೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ದೂರು ನೀಡಿರುವ ದೂರುದಾರರು ನೇರವಾಗಿ ನಮಗೆ ದೂರು ನೀಡಬಹುದು.

ದೂರುದಾರರು ನಮ್ಮನ್ನು ಸಂಪರ್ಕ ಮಾಡಿದರೆ ಆರೋಪಿಗಳನ್ನು ಹಿಡಿಯಲು ನಮಗೂ ಸಹಾಯವಾಗಲಿದೆ ಎಂದು ತಿಳಿಸಿದರು.

ಆದರೂ ಕೂಡ ಈ ವಿಚಾರವನ್ನು ಮೈಸೂರು ನಗರ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಯಾರೇ ಸಾರ್ವಜನಿಕರು ದೂರು ನೀಡಿದರೂ ಸಹ ಅದನ್ನು ಸ್ವೀಕರಿಸಿಕೊಂಡು ಪ್ರಕರಣ ದಾಖಲಿಸಿ ಆದ್ಯತೆಯ ಮೇರೆಗೆ ತನಿಖೆ ನಡೆಸಲಾಗುವುದು ಎಂದು ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News