ತೋನ್ಸೆ ಪಂಚಾಯತ್ ನಲ್ಲಿ ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ

Update: 2018-10-17 12:01 GMT

ಉಡುಪಿ, ಅ. 17: ತೋನ್ಸೆ ಪಂಚಾಯತ್ ನಲ್ಲಿ  ಬೀದಿನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯಕ್ರಮ ನಡೆಯಿತು.

ಗ್ರಾಮದ ವಿವಿಧ ಪ್ರದೇಶಗಳಲ್ಲಿ ಬೀದಿನಾಯಿಗಳಿಂದಾಗಿ ಊರ ನಾಗರಿಕರಿಗೆ ಆಗುತ್ತಿರುವ ಅನಾನುಕೂಲತೆ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಈ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕೆಲ ದಿನಗಳ ಹಿಂದೆ ನಾಯಿಗಳಿಗೆ ರೇಬಿಸ್ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮವನ್ನು ಪಂಚಾಯತ್  ವತಿಯಿಂದ ನಡೆಸಲಾಗಿತ್ತು. 

ಈ  ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷೆ ಫೌಝಿಯ ಪರ್ವೀನ್ , ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ನೇಜಾರ್ ಪಶುವೈದ್ಯರು ಮತ್ತು ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News