ದೇಶಾದ್ಯಂತ ಕಾಂಗ್ರೆಸ್ ಪರ ಹೆಚ್ಚಿದ ಒಲವು : ಆಸ್ಕರ್ ಫೆರ್ನಾಂಡಿಸ್

Update: 2018-10-17 12:12 GMT

ಮಂಗಳೂರು, ಅ.17: ನೋಟ್‌ಬ್ಯಾನ್, ಜಿಎಸ್‌ಟಿ ಮುಂತಾದ ತಪ್ಪು ನಿರ್ಧಾರಗಳಿಂದಾಗಿ ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಗ್ಯಾಸ್, ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಹಾಗೂ ರಫೇಲ್ ಯುದ್ಧ ವಿಮಾನ ಹಗರಣಗಳಿಂದಾಗಿ ಜನರು ಮೋದಿ ಸರಕಾರದ ವಿರುದ್ಧ ರೋಸಿ ಹೋಗಿದ್ದಾರೆ. ಹಾಗೇ ಕಾಂಗ್ರೆಸ್ ಪರ ಒಲವು ಹೆಚ್ಚಾಗಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಬುಧವಾರ ನಡೆದ ಪಕ್ಷದ ಕಾರ್ಯಕರ್ತರ ವಿಶೇಷ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್ ಪಕ್ಷಾಧ್ಯಕ್ಷ ರಾಹುಲ್ ಗಾಂಧಿ ದೇಶಾದ್ಯಂತ ಬಿಡುವಿಲ್ಲದೆ ಸಂಚರಿಸಿ ಕೇಂದ್ರ ಸರಕಾರದ ವೈಫಲ್ಯಗಳನ್ನು ಜನತೆಯ ಮುಂದಿಡುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯು ಜನಬೆಂಬಲ ಕಳೆದುಕೊಳ್ಳುವುದರಲ್ಲಿ ಸಂದೇಹವಿಲ್ಲ. ದೇಶದ ಜನತೆ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಸರಕಾರವನ್ನು ಅಧಿಕಾರಕ್ಕೆ ತರಲು ಬಯಸಿದ್ದಾರೆ. ಹಾಗಾಗಿ ದ.ಕ. ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಗೆಲುವಿಗಾಗಿ ಶ್ರಮವಹಿಸಬೇಕು ಎಂದು ಆಸ್ಕರ್ ಫೆರ್ನಾಂಡಿಸ್ ಕರೆ ನೀಡಿದರು.

ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಮೊಯ್ದಿನ್ ಬಾವ, ಶಕುಂತಳಾ ಶೆಟ್ಟಿ, ಜೆ.ಆರ್ ಲೋಬೊ, ಮಾಜಿ ಮೇಯರ್ ಕವಿತಾ ಸನಿಲ್, ಪಕ್ಷದ ನಾಯಕರಾದ ಬ್ಲೋಸಂ ಫೆರ್ನಾಂಡಿಸ್, ಜಿ.ಎ ಬಾವಾ, ಪಿ.ವಿ. ಮೋಹನ್, ಎಂ.ಎ. ಗಫೂರ್, ರಾಜಶೇಖರ್ ಕೋಟ್ಯಾನ್, ನವೀನ್ ಡಿಸೋಜ, ಮಮತಾ ಗಟ್ಟಿ, ಎಂ.ಎಸ್. ಮುಹಮ್ಮದ್, ಸುರೇಶ್ ಬಲ್ಲಾಳ್, ಮಿಥುನ್ ರೈ, ಶೇಖರ್ ಕುಕ್ಕೇಡಿ ಮತ್ತು ಜಿಲ್ಲೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕೆಪಿಸಿಸಿ ಸದಸ್ಯರು, ಜಿಪಂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News