ಪಿಯು ವಿದ್ಯಾರ್ಥಿಗಳ ರಾಜ್ಯಮಟ್ಟದ ಟೆನಿಕಾಯ್ಟ್ ಪಂದ್ಯಾಟ: ಮಂಡ್ಯ, ಉಡುಪಿ ಜಿಲ್ಲೆ ಪ್ರಥಮ

Update: 2018-10-17 12:59 GMT

ಚಾಮರಾಜನಗರ, ಅ.17 ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2 ದಿನಗಳ ಕಾಲ ನಡೆದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರ ಟೆನಿಕಾಯ್ಟ್ ಪಂದ್ಯಾವಳಿ ನಗರ ಜೆ.ಎಸ್.ಎಸ್ ಕ್ರೀಡಾಂಗಣದಲ್ಲಿ ನಡೆಯಿತು.

ಟೆನಿಕಾಯ್ಟ್ ಪಂದ್ಯಾವಳಿಯಲ್ಲಿ 28 ಜಿಲ್ಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪಂದ್ಯಾವಳಿಯಲ್ಲಿ ಬಾಲಕರ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದರು 

ಇದೇ ಸಂದರ್ಭದಲ್ಲಿ ಮಾತನಾಡಿದ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ಯಾಮ, ಜಿಲ್ಲೆಯಲ್ಲಿ ಪ್ರಥಮವಾಗಿ ಟೆನಿಕಾಯ್ಟ್ ಪಂದ್ಯಾವಳಿ ನಡೆದಿದ್ದು 28 ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಮಟ್ಟದಲ್ಲಿ ಭಾಗವಹಿಸಿದ್ದಾರೆ. ಕ್ರೀಡಾಕೂಟಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಉತ್ತೇಜನ ನೀಡಿದ್ದಾರೆ ಎಂದು ತಿಳಿಸಿದರು.

ಈ ಸಂದರ್ಭ ಪದವಿ ಪೂರ್ವ ಕಾಲೇಜುಗಳ ಪ್ರಾಶುಪಾಲ ಬಂಗಾರನಾಯಕ, ಡಿ.ಎಸ್. ಕೃಷ್ಣಮೂರ್ತಿ, ಬಿ.ಮಹದೇವು, ಬಸವಣ್ಣ, ಚಂದ್ರಶೇಖರಬಾಬು, ಸೋಮಣ್ಣ ಮಹದೇವಸ್ವಾಮಿ, ಬಸವರಾಜಪ್ಪ, ರೇಣುಕಾಸ್ವಾಮಿ, ಹಾಗೂ ಇನ್ನು ಮುಂತಾದವರು ಇದ್ದರು.

ಟೆನಿಕಾಯ್ಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ವಿಜೇತರಾದ ಮಂಡ್ಯ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಯರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ಯಾಮಲ ರವರು ಬಹುಮಾನ ವಿತರಿಸಿದರು. 2 ನೆ ಸ್ಥಾನವನ್ನು ಬಾಲಕರ ವಿಭಾಗದಲ್ಲಿ ಕಾರವಾರ ಜಿಲ್ಲೆ, ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ಉತ್ತರ ಜಿಲ್ಲೆ ಪಡೆಯಿತು.


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News