ಶಿವಮೊಗ್ಗ: ಜೆಡಿಎಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

Update: 2018-10-17 13:32 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ, ಅ. 17: ಜೆಡಿಎಸ್ ಮುಖಂಡನೋರ್ವನ ಮಾನಸಿಕ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್‍ನೋಟ್ ಬರೆದಿಟ್ಟು ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬೊಮ್ಮನಕಟ್ಟೆ ಬಡಾವಣೆಯಲ್ಲಿ ಇತ್ತೀಚೆಗೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಇಂದಿರಾಬಾಯಿ (39) ಆತ್ಮಹತ್ಯೆಗೆ ಶರಣಾದ ಮಹಿಳೆ ಎಂದು ಗುರುತಿಸಲಾಗಿದೆ. ದಾವಣಗೆರೆ ಜಿಲ್ಲೆ ಚೆನ್ನಗಿರಿ ಮೂಲದ ಜೆಡಿಎಸ್ ಪಕ್ಷದ ರಾಜ್ಯ ಮುಖಂಡನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹಾಗೂ ಅನ್ಯಾಯ ಮಾಡಿರುವ ಆತನಿಗೆ ಶಿಕ್ಷೆಯಾಗಲಿ ಎಂದು ಡೆತ್‍ನೋಟ್‍ನಲ್ಲಿ ಬರೆದಿದ್ದಾರೆ ಎನ್ನಲಾಗಿದೆ. 

ಇದರ ಆಧಾರದ ಮೇಲೆ ಪೊಲೀಸರು ಜೆಡಿಎಸ್ ಪಕ್ಷದ ರಾಜ್ಯ ಮುಖಂಡನನ್ನು ಸಂಪರ್ಕಿಸಿದ್ದು, ಆವರು ಪ್ರವಾಸದಲ್ಲಿರುವ ಮಾಹಿತಿ ನೀಡಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News