ಹಿಂ.ವರ್ಗದ ಅಭ್ಯರ್ಥಿಗಳಿಂದ ವಿದೇಶ ವ್ಯಾಸಂಗಕ್ಕೆ ಅರ್ಜಿ ಆಹ್ವಾನ

Update: 2018-10-17 15:29 GMT

 ಉಡುಪಿ, ಅ.17:2018-19ನೇ ಸಾಲಿನಲ್ಲಿ ವಿದೇಶಿ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ ಪಿಹೆಚ್‌ಡಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಅ.31. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‌ಸೈಟ್-www.bacwardclasses.kar.nic.in- ನ್ನು ಹಾಗೂ ದೂರವಾಣಿ ಸಂಖ್ಯೆ: 080-65970004 /0820-2573881 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News