ಶಾಲೆಯಿಂದ ಮನೆಗೆ ತೆರಳುತ್ತಿದ್ದ 7 ವರ್ಷದ ಬಾಲಕಿಯ ಅತ್ಯಾಚಾರ

Update: 2018-10-17 16:43 GMT

ರೋಹ್ಟಕ್, ಅ.17: ಶಾಲೆಯಿಂದ ಮನೆಗೆ ಹಿಂದಿರುಗುತ್ತಿದ್ದ 7 ವರ್ಷದ ಬಾಲಕಿಯೊಬ್ಬಳನ್ನು ಅತ್ಯಾಚಾರಗೈದಿರುವ ಘಟನೆ ಹರ್ಯಾಣದ ರೆವಾರಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿ 35 ವರ್ಷದ ಆರೋಪಿ ರಾಜು ಎಂಬಾತನನ್ನು ಬಂಧಿಸಲಾಗಿದೆ.

19 ವರ್ಷದ ಯುಪಿಎಸ್ಸಿ ಟಾಪರ್ ಯುವತಿಯೊಬ್ಬಳ ಅತ್ಯಾಚಾರ ನಡೆದ ಒಂದು ತಿಂಗಳ ನಂತರ ರೆವಾರಿಯಲ್ಲಿ ಈ ಘಟನೆ ನಡೆದಿದೆ.

ಮನೆಗೆ ಹಿಂದಿರುಗುತ್ತಿದ್ದ ಬಾಲಕಿಯನ್ನು ಆರೋಪಿ ಸಿಹಿತಿಂಡಿ ನೀಡಿ ಪುಸಲಾಯಿಸಿದ್ದ. ನಂತರ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಗೈದಿದ್ದ. ತೀವ್ರ ರಕ್ತಸ್ರಾವದಿಂದ ಬಳಲಿದ ಬಾಲಕಿ ಕಷ್ಟಪಟ್ಟು ಮನೆ ತಲುಪಿದ್ದು, ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ,ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಈ ಬಗ್ಗೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News