×
Ad

ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ಆರೋಪ: ಮಹಿಳೆ ಸೆರೆ

Update: 2018-10-18 14:28 IST

ಬೆಂಗಳೂರು, ಅ.18: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆ ಗೊಳಪಡಿಸಿದ್ದಾರೆ.

ನಗರದಲ್ಲಿ ನವರತ್ನ ಬ್ಯೂಟಿ ಆ್ಯಂಡ್ ವೆಲ್ನೆಸ್ ಸೆಂಟರ್ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ. ಮಹಿಳೆ, ಮಸಾಜ್‌ಗಳ ಮೂಲಕ ಲೈಂಗಿಕ ಚಟುವಟಿಕೆ ಮತ್ತು ವೇಶ್ಯಾವಾಟಿಕೆ ನಡೆಸುತ್ತಿರುವ ಸಂಬಂಧ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಚಟುವಟಿಕೆಗಾಗಿ ಕರೆತಂದಿದ್ದ ನಾಲ್ಕು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಬಂಧಿತ ಮಹಿಳೆಯಿಂದ 4 ಸಾವಿರ ರೂ. ನಗದು, ಒಂದು ಮೊಬೈಲ್, ಒಂದು ಸ್ವೈಪಿಂಗ್ ಮಷಿನ್ ಜಪ್ತಿ ಮಾಡಿದ್ದಾರೆ.

ಈ  ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News