ಎರಡು ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

Update: 2018-10-18 09:55 GMT

 ಹೊಸದಿಲ್ಲಿ, ಅ.18: ತೈಲ ಕಂಪೆನಿಗಳು ಉತ್ಪಾದನಾ ವೆಚ್ಚ ಕೈಬಿಟ್ಟ ಹಿನ್ನೆಲೆಯಲ್ಲಿ ಎರಡು ತಿಂಗಳ ಬಳಿಕ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದೆ.

ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 21 ಪೈಸೆ ಹಾಗೂ ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 11 ಪೈಸೆ ಕಡಿತಗೊಳಿಸಲಾಗಿದೆ ಎಂದು ಸರಕಾರಿ ಸ್ವಾಮ್ಯದ ತೈಲ ಮಾರಾಟ ಸಂಸ್ಥೆಗಳು ಬೆಲೆ ಅಧಿಸೂಚನೆಯಲ್ಲಿ ತಿಳಿಸಿವೆ.

ಇದೀಗ ದಿಲ್ಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 82.62 ರೂ. ಹಾಗೂ ಡೀಸೆಲ್ ಬೆಲೆ 75.58 ರೂ.ಗೆ ಇಳಿದಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 88.08 ರೂ. ಹಾಗೂ ಡೀಸೆಲ್ ಬೆಲೆ ಪ್ರತಿ ಲೀ.ಗೆ 79.24 ರೂ.ಗೆ ಇಳಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News