ಉಪಚುನಾವಣೆ ಮುಂಬರುವ ಚುನಾವಣಗೆ ದಿಕ್ಸೂಚಿ: ಯಡಿಯೂರಪ್ಪ

Update: 2018-10-19 15:15 GMT

ಕೊಲ್ಲೂರು, ಅ.19: ಶಿವಮೊಗ್ಗ ಲೋಕಸಭಾ ಉಪಚುನಾವಣೆಯು ಮುಂದಿನ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮಾಜಿ ಮುಖ್ಯಮತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ವಂಡ್ಸೆಯ ನೆಂಪು ಸಮೀಪ ಗುರುವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡುತಿದ್ದರು. ರಾಜ್ಯ ಮೈತ್ರಿ ಸರಕಾರವು ಕೆಲವೇ ದಿನಗಳಲ್ಲಿ ಇಭ್ಬಾಗವಾಗಿ ಬಿಜೆಪಿ ಮತ್ತೆ ಅಧಿಕಾರಕ್ಕೇರಲಿದೆ. ಆರ್ಥಿಕ ವಾಗಿ ಹದಗೆಟ್ಟ ರಾಜ್ಯ ಸರಕಾರದ ಆಡಳಿತ ವೈಲ್ಯಕ್ಕೆ ಜನತೆ ಮುಂಬರುವ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದೆ. ರಾಜ್ಯದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಸಾಧಿಸಲಿದೆ ಎಂದರು.

ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಮಾತ ನಾಡಿ, ರಾಜ್ಯದಲ್ಲಿ ಮೈತ್ರಿ ಸರಕಾರದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಮುಖಂಡರು ಪರಸ್ಪರ ಆರೋಪದಲ್ಲೇ ಕಾಲ ಕಳೆಯುತ್ತಿದ್ದಾರೆ. ಕಾಂಗ್ರೆಸ್‌ನವರಿಗೆ ಜೆಡಿಎಸ್‌ನವರೇ ವಿರೋಧಿಗಳಾಗಿರುವುದರಿಂದ ಮೈತ್ರಿ ಸರಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ತಿಳಿಸಿದರು.

ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿದರು. ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಸುನಿಲ್ ಕುಮಾರ್, ಭಟ್ಕಳದ ಸುನಿಲ್ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತಿ ಶೆಟ್ಟಿ, ಜಿಪಂ ಸದಸ್ಯರಾದ ಬಾಬು ಹೆಗ್ಡೆ, ಶಂಕರ ಪೂಜಾರಿ, ಸುರೇಶ್ ಬಟ್ವಾಡಿ, ಶೋಭಾ ಪುತ್ರನ್, ರೋಹಿತ್ ಶೆಟ್ಟಿ, ತಾ.ಪಂ. ಉಪಾಧ್ಯಕ್ಷ ಪ್ರವೀಣ ಶೆಟ್ಟಿ, ಮುಖಂಡರಾದ ಯಶಪಾಲ್ ಸುವರ್ಣ, ಕುತ್ಯಾರು ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ಶಾಮಲಾ ಕುಂದರ್, ಕಿರಣ್‌ಕುಮಾರ್ ಕೊಡ್ಗಿ, ಕಾಡೂರು ಸುರೇಶ ಶೆಟ್ಟಿ, ಬೇಳೂರು ರಾಘವೇಂದ್ರ ಶೆಟ್ಟಿ, ದೀಪಕ್ ಕುಮಾರ್ ಶೆಟ್ಟಿ, ಬಾಲಚಂದ್ರ ಭಟ್ ಉಪಸ್ಥಿತರಿದ್ದರು.

ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ದೀಪಕ್ ಕುಮಾ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಡಿಕೆಶಿಗೆ ತಪ್ಪಿನ ಅರಿವಾಗಿದೆ: ಯಡ್ಡಿ

ಸಚಿವ ಡಿ.ಕೆ.ಶಿವಕುಮಾರ್‌ಗೆ ಈಗ ತಪ್ಪಿನ ಅರಿವಾಗಿದೆ. ವೀರಶೈವ ಹಾಗೂ ಲಿಂಗಾಯತ ಎಂಬ ಗೊಂದಲ ಮಾಡಿರುವುದರಿಂದ ಹಿನ್ನಡೆಯಾಗಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ. ಇನ್ನು ಮುಂದೆ ಜಾತಿ- ಧರ್ಮದ ವಿಚಾರದಲ್ಲಿ ಗೊಂದಲ ಮಾಡುವುದನ್ನು ಕಾಂಗ್ರೆಸ್ ಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಮಾಡಬೇಕು. ಆದರೆ ಜಾತಿ ಮತ್ತು ಸಮಾಜ ಒಡೆಯುವ ಕೆಲಸ ಯಾರೂ ಮಾಡಬಾರದು. ಜಾತಿ ಒಡೆದು ಕಾಂಗ್ರೆಸ್ ಕೈ ಸುಟ್ಟುಕೊಂಡಿದೆ ಎಂದರು. ಎಂ.ಬಿ.ಪಾಟೀಲ್, ಕುಲಕರ್ಣಿ ಹೇಳಿಕೆಗಳಿಗೆ ಉತ್ತರಿಸಲು ಯಡಿಯೂರ್ಪ ಈ ಸಂದರ್ಭದಲ್ಲಿ ನಿರಾಕರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News