ದಿಲ್ಲಿ ಸಗಟು ಮಾರುಕಟ್ಟೆಯಲ್ಲಿ ಏರಿಕೆ ಕಂಡ ಈರುಳ್ಳಿ ಬೆಲೆ

Update: 2018-10-19 16:21 GMT

ಹೊಸದಿಲ್ಲಿ,ಅ.19: ಉತ್ಪಾದಕ ರಾಜ್ಯಗಳಿಂದ ಪೂರೈಕೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯ ಮಾರುಕಟ್ಟೆಯಲ್ಲಿ ಸಗಟು ಈರುಳ್ಳಿ ಬೆಲೆ ಹತ್ತು ದಿನಗಳಲ್ಲಿ 23ರೂ.ಗೆ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ಈ ಏರಿಕೆಯ ಪರಿಣಾಮ ಈರುಳ್ಳಿಯ ಚಿಲ್ಲರೆ ಮಾರಾಟ ಬೆಲೆಯಲ್ಲೂ ಏರಿಕೆಯಾಗಿದ್ದು ಪ್ರತಿ ಕಿಲೊಗೆ 30-40ರೂ.ಗೆ ಮಾರಾಟವಾಗುತ್ತಿದೆ ಎಂದು ವ್ಯಾಪಾರಿಗಳು ಮಾಹಿತಿ ನೀಡಿದ್ದಾರೆ. ಕಳೆದ ಹತ್ತು ದಿನಗಳಲ್ಲಿ ಈರುಳ್ಳಿ ಬೆಲೆಯಲ್ಲಿ 7ರಿಂದ 10ರೂ. ಏರಿಕೆಯಾಗಿದೆ ಎಂದು ಈರುಳ್ಳಿ ಮತ್ತು ಆಲೂಗಡ್ಡೆ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಶರ್ಮಾ ತಿಳಿಸಿದ್ದಾರೆ. ಇದೇ ವೇಳೆ, ಏಶ್ಯಾದ ಅತ್ಯಂತ ದೊಡ್ಡ ಈರುಳ್ಳಿ ಸಗಟು ಮಾರುಕಟ್ಟೆಯಾಗಿರುವ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಲಸಲ್ಗಾಂವ್‌ನಲ್ಲೂ ಈರುಳ್ಳಿ ಬೆಲೆ 21-22ರೂ. ಪ್ರತಿ ಕಿಲೊ ಏರಿಕೆಯಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News