ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು

Update: 2018-10-19 17:38 GMT

ಪುತ್ತೂರು, ಅ. 19: ಕೆದಿಲ ಶ್ಯಾಮ್ ಪ್ರಸಾದ್ ಪ್ರಕರಣದಲ್ಲಿ ಆರ್‌ಎಸ್‌ಎಸ್ ಮುಖಂಡ ಡಾ ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಪುತ್ತೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಶ್ಯಾಮ್ ಶಾಸ್ತ್ರೀ ಆತ್ಮಹತ್ಯೆಗೆ ದುಷ್ಪ್ರೇರಣೆ ನೀಡಿದ್ದಾರೆ ಎಂದು ಚಾರ್ಜ್‌ಶೀಟ್ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಬೋನಂತಾಯ ಶಿವಶಂಕರ ಭಟ್ ಅವರಿಗೆ ಪುತ್ತೂರಿನ ಎಸಿಜೆಎಂ ನ್ಯಾಯಾಲಯ ವಾರಂಟ್ ಹೊರಡಿಸಿತ್ತು. ರಾಘವೇಶ್ವರ ಭಾರತೀ ಸ್ವಾಮೀಜಿ ಅವರಿಗೆ ಸಮನ್ಸ್ ಹೊರಡಿಸಿತ್ತು. ಅ. 31ರಂದು ಮುಂದಿನ ವಿಚಾರಣೆ ನಡೆಯಲಿದ್ದು, ಇದಕ್ಕೆ ಪೂರ್ವಭಾವಿಯಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಜಾಮೀನು ಪಡೆದುಕೊಂಡಿದ್ದಾರೆ.

2014ರ ಆ. 31ರಂದು ಕೆದಿಲ ಶ್ಯಾಮ ಪ್ರಸಾದ್ ಶಾಸ್ತ್ರೀ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News