​ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ: ಮಹಿಳೆ ಸೆರೆ

Update: 2018-10-19 17:58 GMT

ಬೆಂಗಳೂರು, ಅ.19: ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದಡಿ ಮಹಿಳೆಯೊಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಸ್ವಾತಿ ಎಂಬಾಕೆ ಬಂಧಿತ ಆರೋಪಿಯಾಗಿದ್ದು, ನಗರದಲ್ಲಿ ನವರತ್ನ ಬ್ಯೂಟಿ ಅಂಡ್ ವೆಲ್ನೆಸ್ ಸೆಂಟರ್ ಹೆಸರಿನಲ್ಲಿ ದಂಧೆ ನಡೆಸುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ.

ಮಹಿಳೆಯೊಬ್ಬಳು ಮಸಾಜ್ ಸೆಂಟರ್ ಮೂಲಕ ಲೈಂಗಿಕ ಚಟುವಟಿಕೆ ಮತ್ತು ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವ ಸಂಬಂಧ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಟುವಟಿಕೆಗಾಗಿ ಕರೆತಂದಿದ್ದ ನಾಲ್ಕು ಮಹಿಳೆಯರ ರಕ್ಷಣೆ ಮಾಡಲಾಗಿದ್ದು, ಬಂಧಿತ ಮಹಿಳೆಯಿಂದ 4 ಸಾವಿರ ರೂ. ನಗದು, ಒಂದು ಮೊಬೈಲ್, ಒಂದು ಸ್ವೈಪಿಂಗ್ ಮಷಿನ್ ಜಪ್ತಿ ಮಾಡಿದ್ದಾರೆ.

ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News