×
Ad

ಭ್ರಷ್ಟಾಚಾರ ನಿಗ್ರಹ ದಳದಿಂದ ಅಹವಾಲು ಸ್ವೀಕಾರ

Update: 2018-10-20 19:42 IST

ಉಡುಪಿ, ಅ.20: ಉಡುಪಿ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯ ಅಧಿಕಾರಿಗಳು ಅ.25ರಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಬೈಂದೂರು ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಕುಂದಾಪುರ ಪ್ರವಾಸಿ ಮಂದಿರದಲ್ಲಿ ಮತ್ತು ಅ.26ರಂದು ಬೆಳಿಗ್ಗೆ 11ಗಂಟೆಯಿಂದ ಒಂದು ಗಂಟೆಯವರೆಗೆ ಕಾರ್ಕಳ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಹೆಬ್ರಿ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಸರಕಾರಿ ಅಧಿಕಾರಿಗಳು ತನ್ನ ದಿನನಿತ್ಯದ ಕೆಲಸಗಳನ್ನು ನಿರ್ವಹಿಸಲು ಅನಗತ್ಯ ವಿಳಂಬ ಮಾಡಿದ್ದಲ್ಲಿ ಹಾಗೂ ನಿರ್ಲಕ್ಷ ತೋರಿದ್ದಲ್ಲಿ ಮತ್ತು ಲಂಚ ಕೇಳಿದಲ್ಲಿ ದೂರು ಸ್ವೀಕರಿಸಲಾಗುವುದು ಎಂದು ಭ್ರಷ್ಟಾಚಾರ ನಿಗ್ರಹ ದಳ ಉಡುಪಿ ಪೊಲೀಸ್ ಠಾಣೆಯ ಉಪಾಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News