ಬಂಟ್ವಾಳ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
ಬಂಟ್ವಾಳ, ಅ. 20: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಠಾಣೆ ಪೊಲೀಸರು ಶನಿವಾರ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಜೇಶ್ವರ ತಾಲೂಕಿನ ಪೈವಳಿಕೆ ಗ್ರಾಮದ ನಿವಾಸಿ ಝುಬೈರ್ (26) ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ ವ್ಯಕ್ತಿ.
ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿ ಝುಬೈರ್ ಆರೋಪಿಯಾಗಿದ್ದು, ಈ ಬಗ್ಗೆ ಬಂಟ್ವಾಳ ನ್ಯಾಯಾಲಯದಲ್ಲಿ ವಿಚಾರಣೆಯು ನಡೆಯುತ್ತಿದೆ. ಆದರೆ, ಝುಬೈರ್ ನ್ಯಾಯಾಲಯಕ್ಕೆ ಹಾಜರಾಗದೇ ಇರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಲಯವು ಈತನಿಗೆ ವಾರೆಂಟ್ ಹೊರಡಿಸಿ 2019ರ ಫೆ.13ಕ್ಕೆ ಹಾಜರುಪಡಿಸುವಂತೆ ಆದೇಶಿಸಿತ್ತು. ಆದರೆ, ಆತ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಳ್ಳುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಜೂಬೈರ್ ಇಂದು ಮಂಗಳೂರು ವಿಮಾನ ನಿಲ್ದಾಣದಿಂದ ಬರುತ್ತಿರುವುದಾಗಿ ಮಾಹಿತಿ ತಿಳಿದ ಫೋಲೀಸರು ಎಲ್‍ಒಸಿ ಮುಖಾಂತರ ದಸ್ತಗಿರಿ ಮಾಡಿ, ವಿಟ್ಲ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ.