ಅ.24ಕ್ಕೆ ಮಹರ್ಷಿ ವಾಲ್ಮೀಕಿ ಜಯಂತಿ: ಪ್ರಶಸ್ತಿ ಪ್ರದಾನ ಸಮಾರಂಭ

Update: 2018-10-20 16:53 GMT

ಬೆಂಗಳೂರು, ಅ. 20: ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭವನ್ನು ಅ.24ರ ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಾಲ್ಮೀಕಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಶಿವಾಜಿನಗರ ಕ್ಷೇತ್ರದ ಶಾಸಕ ಆರ್.ರೋಷನ್ ಬೇಗ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಸಚಿವರು, ಶಾಸಕರು ಹಾಗೂ ಸಮುದಾಯದ ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News