​ಕೋರಮಂಗಲ: ಪೊಲೀಸ್ ಸಂಸ್ಮರಣ ದಿನಾಚರಣೆ

Update: 2018-10-21 04:33 GMT

ಬೆಂಗಳೂರು, ಅ. 21: ಕೋರಮಂಗಲದ ಕೆಎಸ್‌ಆರ್‌ಪಿ 3ನೇ ಪಡೆ ಕವಾಯತು ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಹುತಾತ್ಮರ ಸ್ಮಾರಕಕ್ಕೆ ಪುಷ್ಪ ಮಾಲಿಕೆ ಸಮರ್ಪಿಸಿ ಗೌರವ ಸಲ್ಲಿಸಿದರು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಸರಕಾರದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ್, ಡಿಜಿ ನೀಲಮಣಿ ರಾಜು, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್, ನಟ ಸುದೀಪ್ ಹಾಗು ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News