ಮಾದಕ ವಸ್ತು ಮಾರಾಟ ಆರೋಪಿ ಬಂಧನ: 3 ಲಕ್ಷ ರೂ.ಮೌಲ್ಯದ ಆಫೀಮು ಜಪ್ತಿ

Update: 2018-10-21 13:21 GMT

ಬೆಂಗಳೂರು, ಅ.21: ಮಾದಕ ವಸ್ತು ಅಫೀಮು ಮಾರಾಟ ಮಾಡುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಇಲ್ಲಿನ ಕೆಪಿ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿ 3 ಲಕ್ಷ ರೂ. ಬೆಲೆಯ 750ಗ್ರಾಂ ಅಫೀಮ್‌ಅನ್ನು ಜಪ್ತಿ ಮಾಡಿದ್ದಾರೆ.

ನಗರದ ಪಂತರಪಾಳ್ಯದ ಬೇರಾ ರಾಮ್ (32) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಮಾದಕ ವಸ್ತು ಮಾರಾಟ ಮಾಡುವುದನ್ನು ತಡೆಯುವ ಸಲುವಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರ ಸಭೆ ಕರೆದು ತಿಳುವಳಿಕೆಗಳನ್ನು ಹಾಗೂ ಇದಕ್ಕೆ ಸಂಬಂಧಿಸಿದಂತೆ ಕಿರುಹೊತ್ತಿಗೆಗಳನ್ನು ಹಂಚಿಕೆ ಮಾಡಲಾಗಿತ್ತು. ಅದರಂತೆ ಕೆಪಿ ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಎಸ್.ಎಸ್.ಮಂಜು ಅವರಿಗೆ ಟೆಲಿಕಾಂ ಬಡಾವಣೆಯ ಬಳಿ ಒಬ್ಬಾತ ಅಫೀಮ್‌ಅನ್ನು ತಂದು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾನೆಂದು ತಿಳಿದಾಗ, ಮಾಹಿತಿ ಸಂಗ್ರಹಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯು ಅಫೀಮ್‌ಅನ್ನು ರಾಜಸ್ಥಾನದಿಂದ ರೈಲಿನಲ್ಲಿ ಬೆಂಗಳೂರಿಗೆ ತಂದು ಮಾರಾಟ ಮಾಡುತ್ತಿರುವುದಾಗಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ತನಿಖೆ ಮುಂದುವರೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News