ಮೊದಲ ಏಕದಿನ: ಕೊಹ್ಲಿ 36ನೇ ಶತಕ

Update: 2018-10-21 14:17 GMT

ಗುವಾಹತಿ, ಅ.21: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ವಿರುದ್ಧ ರವಿವಾರ  ಮೊದಲ ಏಕದಿನ ಅಂತರ್ ರಾಷ್ಟ್ರೀಯ  ಪಂದ್ಯದಲ್ಲಿ ಶತಕ ದಾಖಲಿಸಿದರು.

ಕೊಹ್ಲಿ 212ನೇ ಏಕದಿನ ಪಂದ್ಯದಲ್ಲಿ 56 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಲ್ಲಿ 36ನೇ ಶತಕ ದಾಖಲಿಸಿದರು.

ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್‌ಇಂಡೀಸ್ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 322 ರನ್ ಗಳಿಸಿತ್ತು.

ಗೆಲುವಿಗೆ 323 ರನ್‌ಗಳ ಸವಾಲನ್ನು ಪಡೆದ ಭಾರತ 2 ಓವರ್‌ಗಳಲ್ಲಿ 10 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ದಾಂಡಿಗ ಶಿಖರ್ ಧವನ್ (4) ನಿರ್ಗಮನದ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ತಂಡ ಬ್ಯಾಟಿಂಗ್‌ನ್ನು ಮುನ್ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News