ಮೊದಲ ಏಕದಿನ: ಕೊಹ್ಲಿ ,ರೋಹಿತ್ ಶತಕ

Update: 2018-10-21 14:49 GMT

ಗುವಾಹತಿ, ಅ.21: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ  ಮತ್ತು ಉಪ ನಾಯಕ ರೋಹಿತ್  ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಶತಕ ದಾಖಲಿಸಿದರು.

ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ವೆಸ್ಟ್‌ಇಂಡೀಸ್ ತಂಡ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 322 ರನ್ ಗಳಿಸಿತ್ತು.

ಗೆಲುವಿಗೆ 323 ರನ್‌ಗಳ ಸವಾಲನ್ನು ಪಡೆದ ಭಾರತ 2 ಓವರ್‌ಗಳಲ್ಲಿ 10 ರನ್ ಗಳಿಸುವಷ್ಟರಲ್ಲಿ ಮೊದಲ ವಿಕೆಟ್ ಕಳೆದುಕೊಂಡಿತು. ಆರಂಭಿಕ ದಾಂಡಿಗ ಶಿಖರ್ ಧವನ್ (4) ನಿರ್ಗಮನದ ಬಳಿಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ತಂಡ ಬ್ಯಾಟಿಂಗ್‌ನ್ನು ಮುನ್ನಡೆಸಿದರು.

ಕೊಹ್ಲಿ 212ನೇ ಏಕದಿನ ಪಂದ್ಯದಲ್ಲಿ 56 ಎಸೆತಗಳಲ್ಲಿ 16 ಬೌಂಡರಿಗಳ ನೆರವಿನಲ್ಲಿ 36ನೇ ಶತಕ ದಾಖಲಿಸಿದರು. ರೋಹಿತ್ ಶರ್ಮಾ 189ನೇ ಏಕದಿನ ಪಂದ್ಯದಲ್ಲಿ 20ನೇ ಶತಕ ದಾಖಲಿಸಿದರು. ರೋಹಿತ್ ಶರ್ಮಾ 84 ಎಸೆತಗಳಲ್ಲಿ 10 ಬೌಂಡರಿ ಮತ್ತು 5 ಸಿಕ್ಸರ್ ನೆರವಿನಲ್ಲಿ ಶತಕ ಪೂರೈಸಿದರು.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ  ಎರಡನೇ ವಿಕೆಟ್ ಗೆ  246 ರನ್ ಗಳ ಜೊತೆಯಾಟ ನೀಡಿದರು. ಕೊಹ್ಲಿ 140 ರನ್ (107ಎ, 21ಬೌ, 2ಸಿ) ಗಳಿಸಿ ಔಟಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News