'ರಫೇಲ್' ಅವ್ಯವಹಾರ ಆರೋಪ: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಯತ್ನ

Update: 2018-10-21 15:22 GMT

ಬೆಂಗಳೂರು, ಅ.21: ರಫೇಲ್ ಯುದ್ಧ ವಿಮಾನಗಳ ಖರೀದಿಯ ಒಪ್ಪಂದದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ರವಿವಾರ ನಗರದ ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಿಂದ ಮಲ್ಲೇಶ್ವರಂ ವರೆಗೆ ಬೈಕ್ ರ್ಯಾಲಿ ನಡೆಸಿ, ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ನಟರಾಜ ಚಲನಚಿತ್ರ ಮಂದಿರದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದುಕೊಂಡರು.

ಬೈಕ್ ರ್ಯಾಲಿಯಲ್ಲಿ ಯುವ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಬಸವನಗೌಡ ಬಾದರ್ಲಿ, ಯುವ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ಬಿ.ವಿ.ಶ್ರೀನಿವಾಸ, ರಾಜ್ಯ ಉಪಾಧ್ಯಕ್ಷ ಕೆಂಪರಾಜು ಸೇರಿದಂತೆ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಕಚೇರಿಯ ಸುತ್ತಮುತ್ತಲು ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News