ನೇಣು ಬಿಗಿದು ಎಂ.ಎ ಪದವೀಧರ ಆತ್ಮಹತ್ಯೆ

Update: 2018-10-21 15:23 GMT

ಬೆಂಗಳೂರು, ಅ.21: ಎಂ.ಎ ಪದವೀಧರರೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಇಲ್ಲಿನ ವಿದ್ಯಾರಣ್ಯ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ದೊಡ್ಡ ಬೊಮ್ಮಸಂದ್ರದ ರಾಮಕ್ಕ ದಾಸಪ್ಪಲೇಔಟ್‌ನ ಮೊದಲನೇ ಕ್ರಾಸ್ ನಿವಾಸಿ ರಾಜಶೇಖರ್ (26) ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಗುರುತಿಸಿದ್ದಾರೆ.

ಶನಿವಾರ ಸಂಜೆ ರಾಜಶೇಖರ್, ಮನೆಯಲ್ಲಿ ಫ್ಯಾನಿಗೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೊಳಪಡಿಸಿರುವ ವಿದ್ಯಾರಣ್ಯಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News