ಟಿ.ವಿ ಚಾನೆಲ್ ಮೂಲಕ ಇಂಗ್ಲಿಷ್ ಕಲಿಕೆ: ನ.14 ರಂದು ಚಾಲನೆ

Update: 2018-10-21 16:52 GMT

ಬೆಂಗಳೂರು, ಅ. 21: ಸರಕಾರಿ ಶಾಲಾ ಮಕ್ಕಳಿಗೆ ಇಂಗ್ಲಿಷ್ ಕಲಿಸುವ ಉದ್ದೇಶದಿಂದ ಅಭಿವೃದ್ಧಿಪಡಿಸಲಾಗಿರುವ ‘ಆಂಗ್ಲ ಕಲಿಕಾ’ ಚಾನೆಲ್‌ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನವೆಂಬರ್ 14ರ ಮಕ್ಕಳ ದಿನಾಚರಣೆಯಂದು ಚಾಲನೆ ನೀಡಲಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್, ಮಕ್ಕಳು ಸುಲಭವಾಗಿ ಇಂಗ್ಲಿಷ್ ವ್ಯಾಕರಣ, ಮಾತನಾಡುವುದನ್ನು ಕಲಿಯಲು ಪೂರಕವಾಗಿರುವ ಕಾರ್ಯಕ್ರಮಗಳು ಹಾಗೂ ಆಯಾ ತರಗತಿ ಪಠ್ಯಗಳು ಚಾನೆಲ್‌ನಲ್ಲಿ ಪ್ರಸಾರವಾಗಲಿವೆ. ಅದಕ್ಕಾಗಿಯೇ ಮೈಕ್ರೋಸಾಫ್ಟ್ ಸಂಸ್ಥೆ ಈಗಾಗಲೇ ದೂರದರ್ಶನದೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ದೂರದರ್ಶನ ಅಡಿಯಲ್ಲಿ ಇಂಗ್ಲಿಷ್ ಕಲಿಕಾ ಚಾನೆಲ್ ಪ್ರಸಾರವಾಗಲಿದೆ. ಸರಕಾರಿ ಶಾಲಾ ಮಕ್ಕಳಿಗೆ ಇಂಗ್ಲಿಷ್ ಕಲಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದರು.

ಅದರಂತೆ ಮೈಕ್ರೋಸಾಫ್ಟ್ ಸಂಸ್ಥೆ ದೂರದರ್ಶನದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಚಾನೆಲ್‌ನಲ್ಲಿ ಮಕ್ಕಳಿಗೆ ಮಾತ್ರವಲ್ಲದೆ, ಶಿಕ್ಷಕರಿಗೂ ಹಲವಾರು ಕಲಿಕಾ ಕಾರ್ಯಕ್ರಮಗಳು ಪ್ರಸಾರವಾಗಲಿವೆ. ಪ್ರಮುಖವಾಗಿ ಶಾಲಾ ತರಗತಿಗಳಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದುಕೊಳ್ಳುವ ರೀತಿ ಹಾಗೂ ಕೌಶಲ್ಯ ಅಭಿವೃದ್ಧಿಯ ಕುರಿತು ಶಿಕ್ಷಣ ತಜ್ಞರು ಶಿಕ್ಷಕರಿಗೆ ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News