ಹನೂರು: ಮಲೆಮಹದೇಶ್ವರ ಬೆಟ್ಟಕ್ಕೆ ಸಚಿವ ಜಿ.ಟಿ ದೇವೇಗೌಡ ಭೇಟಿ
Update: 2018-10-21 22:46 IST
ಹನೂರು,ಅ.21: ರಾಜ್ಯ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ ಮಲೆಮಹದೇಶ್ವರ ಬೆಟ್ಟಕ್ಕೆ ಭಾನುವಾರ ಸಂಜೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಸಚಿವರಾದ ನಂತರ ಮೊದಲ ಬಾರಿಗೆ ಬೆಟ್ಟಕ್ಕೆ ಭೇಟಿ ನೀಡಿದ ಅವರು, ಸಾಲೂರು ಬೃಹನ್ಮಠಾಧ್ಯಕ್ಷ ಗುರುಸ್ವಾಮೀಜಿ ಅವರ ಸಮ್ಮುಖದಲ್ಲಿ ಮಲೈಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಕೆಲ ಕಾಲ ಬೆಟ್ಟದ ರಾಷ್ಟ್ರಪತಿ ಭವನದಲ್ಲಿ ವಿಶ್ರಾಂತಿ ಪಡೆದರು.
ಈ ಸಂದರ್ಭ ಪ್ರಾಧಿಕಾರದ ಕಾರ್ಯದರ್ಶಿ ಗಾಯತ್ರಿ, ಮುಖಂಡ ಕಾಮಗೆರೆ ರವಿ ಸೇರಿದಂತೆ ಹಲವರಿದ್ದರು.