ಅಮೃತಸರ: ರೈಲು ದುರಂತದ ಸ್ಥಳದಲ್ಲಿ ಪ್ರತಿಭಟನೆ

Update: 2018-10-21 17:39 GMT

ವಿಜಯದಶಮಿ ದಿನದಂದು 60ಕ್ಕೂ ಹೆಚ್ಚು ಮಂದಿಯನ್ನು ಬಲಿ ತೆಗೆದುಕೊಂಡ ರೈಲು ದುರಂತ ನಡೆದ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಲಾಠಿಚಾರ್ಜ್ ನಡೆಸಿ ಚದುರಿಸಿದರು ಎಂದು ವರದಿಯಾಗಿದೆ. ದುರಂತದಲ್ಲಿ ಮೃತಪಟ್ಟವರಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ದುರಂತದ ಬಳಿಕ ಹಲವರು ನಾಪತ್ತೆಯಾಗಿದ್ದು ಅವರನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿ ಪ್ರತಿಭಟನಾಕಾರರು ಘೋಷಣೆ ಕೂಗುತ್ತಿದ್ದರು. ರೈಲು ಹಳಿಯ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದವರನ್ನು ಲಾಠಿಬೀಸಿ ಪೊಲೀಸರು ಚದುರಿಸಿದರು. ಈ ಸಂದರ್ಭ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದಾಗ ಪೊಲೀಸ್ ಸಿಬ್ಬಂದಿ ಸಹಿತ ಹಲವರು ಗಾಯಗೊಂಡರು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor