ಮರಳು ಸಮಸ್ಯೆ ಪರಿಹರಿಸಲು ಒತ್ತಾಯ: ಉಡುಪಿ ಜಿಲ್ಲಾಧಿಕಾರಿ ಕಚೇರಿಯೆದುರು ಧರಣಿ

Update: 2018-10-22 06:14 GMT

ಉಡುಪಿ, ಅ.22: ಜಿಲ್ಲೆಯಲ್ಲಿ ಮರಳು ನೀತಿ ಸರಳಗೊಳಿಸಿ, ಕೂಡಲೇ ಸಮಸ್ಯೆ ಪರಿಹಾರ ಕಲ್ಪಿಸಲು ಒತ್ತಾಯಿಸಿ ಕಟ್ಟಡ ಸಾಮಗ್ರಿ ಸಾಗಾಟ ವಾಹನಗಳ ಮಾಲಕ-ಚಾಲಕರ ಸಂಘದ ನೇತೃತ್ವದಲ್ಲಿ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿಯೆದುರು ಧರಣಿ ನಡೆಯಿತು.

ಧರಣಿನಿರತರನ್ನು ಉದ್ದೇಶಿಸಿ ಮಾತನಾಡಿದ ಸಂಘದ ಮುಖಂಡ ರಾಘವೇಂದ್ರ ಶೆಟ್ಟಿ, ಜಿಲ್ಲೆಯಲ್ಲಿನ ಮರಳು ಸಮಸ್ಯೆಗೆ ಜಿಲ್ಲಾಧಿಕಾರಿಯೇ ಹೊಣೆ. ಮರಳು ಸಮಸ್ಯೆಯನ್ನು ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳಬೇಕು. 170 ಮರಳು ದಿಬ್ಬಗಳಲ್ಲೂ ಮರಳುಗಾರಿಕೆಗೆ ಅವಕಾಶ ಕಲ್ಪಿಸಬೇಕು ಒಂದು ಒತ್ತಾಯಿಸಿದರು.

ಕುಂದಾಪುರ ತಾಪಂ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಮಾತನಾಡಿ, ಮರಳು ಸಮಸ್ಯೆಯನ್ನು ಈ ಹಿಂದೆಯೇ ಪರಿಹರಿಸಬೇಕಿತ್ತು. ಈಗ ಇದು ವಿಕೋಪಕ್ಕೆ ಹೋಗಿದ್ದು, ಇದಕ್ಕೆ ಜಿಲ್ಲಾಡಳಿತವೇ ಕಾರಣ. ಇದನ್ನು ಪರಿಹರಿಸಲು ಜಿಲ್ಲಾಡಳಿತ ಕೂಡಲೇ ಮುಂದಾಗಬೇಕು ಎಂದು ಒತ್ತಾಯಿಸಿದರು.

ನೂರಕ್ಕೂ ಅಧಿಕ ಲಾರಿಗಳನ್ನು ಉದ್ಯಾವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಿ ಧರಣಿ ನಡೆಸಲಾಯಿತು.
ಧರಣಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯೆದುರು ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ. ಎಲ್ಲೆಡೆ ಬಿಗಿಭದ್ರತೆ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News