ಮೀ ಟೂ: ಎಫ್‌ಐಆರ್ ದಾಖಲಿಸಲು ಕೋರಿದ್ದ ಅರ್ಜಿಯ ಕ್ಷಿಪ್ರ ವಿಚಾರಣೆಗೆ ಸುಪ್ರೀಂ ನಿರಾಕರಣೆ

Update: 2018-10-22 13:51 GMT

ಹೊಸದಿಲ್ಲಿ, ಅ.22: ದೇಶದಲ್ಲಿ ನಡೆಯುತ್ತಿರುವ ‘ಮೀ ಟೂ’ ಅಭಿಯಾನದ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರು ಮಾಡಿರುವ ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಆರೋಪದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಲು ಸೂಚಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಕ್ಷಿಪ್ರ ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.

 ಈ ಅರ್ಜಿಯನ್ನು ಕ್ರಮಬದ್ಧವಾದ ರೀತಿಯಲ್ಲೇ ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು. ಕ್ಷಿಪ್ರ ವಿಚಾರಣೆ ನಡೆಸುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರಿದ್ದ ನ್ಯಾಯಪೀಠ ಅರ್ಜಿದಾರರಾದ ವಕೀಲ ಎಂ.ಎಲ್.ಶರ್ಮರಿಗೆ ತಿಳಿಸಿದರು.

ಎಫ್‌ಐಆರ್ ದಾಖಲಿಸಲು ಸೂಚಿಸುವ ಜೊತೆಗೆ ಬಹಿರಂಗವಾಗಿ ಆರೋಪ ಮಾಡಿರುವ ಮಹಿಳೆಯರಿಗೆ ರಕ್ಷಣೆ ಹಾಗೂ ಸಹಕಾರ ಒದಗಿಸುವಂತೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸೂಚಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News