×
Ad

ಅ.27ರಂದು ರಾಷ್ಟ್ರಮಟ್ಟದ ಪ್ರಾಜೆಕ್ಟ್ ಪ್ರದರ್ಶನ

Update: 2018-10-22 19:42 IST

ಶಿರ್ವ, ಅ.22: ಬಂಟಕಲ್ಲಿನ ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ ರಾಷ್ಟ್ರಮಟ್ಟದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ(ಐಐಓಟಿ 2018)ಯನ್ನು ಅ.27ರಂದು ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಉದ್ಘಾಟಿಸಲಿದ್ದು ಬೆಂಗಳೂರಿನ ಟಯಾನ ಸಾಫ್ಟ್‌ವೇರ್ ಕಂಪೆನಿಯ ಮುಖ್ಯ ತಾಂತ್ರಿಕ ಅಧಿಕಾರಿ ರತನ್ ರಾವ್ ಪಾತೂರು, ಮಂಗಳೂರಿನ ಇನ್ಫೋಸಿಸ್ ಸಂಸ್ಥೆಯ ನಿರ್ದೇಶಕ ಕೃಷ್ಣರಾಜ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಸುಮಾರು 40ಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳು ಪ್ರದರ್ಶನಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News