ಜೇನುಗಾರಿಕೆ ತರಬೇತಿ - ಅರ್ಜಿ ಆಹ್ವಾನ

Update: 2018-10-22 14:40 GMT

ಉಡುಪಿ, ಅ.22: ಪ್ರಸಕ್ತ ಸಾಲಿನಲ್ಲಿ ನ.1ರಿಂದ ಜ.31ರವರೆಗೆ ರೈತ ಮಕ್ಕಳಿಗೆ (ಪುರುಷರಿಗೆ) ಮೂರು ತಿಂಗಳ ಜೇನುಗಾರಿಕೆ ತರಬೇತಿ ಕಾರ್ಯಕ್ರಮವನ್ನು ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ಅರ್ಜಿಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ (ರಾಜ್ಯ ವಲಯ) ಕಚೇರಿಯಲ್ಲಿ ಹಾಗೂ ಇಲಾಖೆ ವೆಬ್‌ಸೈಟ್ www.horticulture.kar.nic.in-ನಲ್ಲಿ ಅ.26ರವರೆಗೆ ಡೌನ್‌ಲೋಡ್ ಮಾಡಿ ಕೊಳ್ಳಬಹುದು. ಅರ್ಜಿಗಳನ್ನು ಸಲ್ಲಿಸಲು ಅ.27 ಕೊನೆಯ ದಿನವಾಗಿದೆ.
ಅಭ್ಯರ್ಥಿಗಳು ಕನಿಷ್ಠ 18ರಿಂದ 35 ವರ್ಷದೊಳಗಿನವರಾಗಿದ್ದು, ಎಸ್ಸೆಸ್ಸೆಲ್ಸಿ ಉತ್ತೀರ್ಣರಾಗಿರಬೇಕು.ಅಭ್ಯರ್ಥಿಯ ತಂದೆ/ ತಾಯಿ/ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಆಯ್ಕೆಯಾದ ಅ್ಯರ್ಥಿಗಳಿಗೆ ಮಾಸಿಕ 1250 ರೂ. ಶಿಷ್ಯವೇತನ ನೀಡಲಾಗುವುದು ಎಂದು ಉಡುಪಿ ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News