ಕುಟುಂಬ ಸದಸ್ಯರನ್ನು ಕಟ್ಟಿ ಹಾಕಿ 9ನೆ ತರಗತಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ

Update: 2018-10-22 15:49 GMT

ಮುಝಫ್ಫರ್ ನಗರ, ಅ.22: ಕುಟುಂಬ ಸದಸ್ಯರ ಎದುರಲ್ಲೇ 9ನೆ ತರಗತಿಯ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಗೈದ ಘಟನೆ ಬಿಹಾರದ ಮುಝಫ್ಫರ್ ಪುರದಲ್ಲಿ ನಡೆದಿದೆ.

ಇಲ್ಲಿನ ಇಮ್ಲಿ ಚೌಕ್ ಎಂಬಲ್ಲಿರುವ ಬಾಲಕಿಯ ಮನೆಯಲ್ಲೇ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿ ವಿಜಯ್ ಪ್ರಸಾದ್ ರೈ ಮಾಹಿತಿ ನೀಡಿದ್ದಾರೆ.

ಬಾಲಕಿಯ ಮನೆಗೆ ನುಗ್ಗಿದ ನಾಲ್ವರು ಕುಟುಂಬ ಸದಸ್ಯರಿಗೆ ಥಳಿಸಿ ಕೈಕಾಲುಗಳನ್ನು ಕಟ್ಟಿ ಹಾಕಿ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ಹೇಳಿಕೆಯ ಆಧಾರದಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಆರೋಪಿಗಳ ಮನೆ ಸೇರಿದಂತೆ ಹಲವು ಕಡೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News