ಅಕ್ರಮ ಮರಳು ಸಾಗಾಟ: ಎರಡು ಟಿಪ್ಪರ್ ವಶಕ್ಕೆ
Update: 2018-10-22 22:40 IST
ಮಂಗಳೂರು, ಅ.22: ಕಣ್ಣೂರಿನಿಂದ ಕೇರಳಕ್ಕೆ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಎರಡು ಟಿಪ್ಪರ್‌ಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಗರದ ಪಂಪ್‌ವೆಲ್ ಬಳಿ ಸೋಮವಾರ ನಸುಕಿನ ವೇಳೆ ನಡೆದಿದೆ.
ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್‌ಗಳು ಕೇರಳ ಮೂಲದ ವ್ಯಕ್ತಿಗೆ ಸೇರಿದ್ದಾಗಿವೆ. ವಶಕ್ಕೆ ಪಡೆದ ಮರಳಿನ ಮೌಲ್ಯ 1.10 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ವಶಕ್ಕೆ ಪಡೆದ ಮರಳನ್ನು ಮುಂದಿನ ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.
ಈ ಕುರಿತು ಮಂಗಳೂರು ನಗರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.