ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

Update: 2018-10-22 17:16 GMT

ಮಂಗಳೂರು, ಅ.22: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ 2018-19ನೇ ಸಾಲಿಗೆ ಮಹಿಳೆಯರು ಕೈಗೊಳ್ಳುವ ವ್ಯಾಪಾರ, ಸೇವಾ ಹಾಗೂ ಗುಡಿ ಕೈಗಾರಿಕಾ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ನೀಡುವ ಯೋಜನೆಯಡಿ ಮಂಗಳೂರು ಗ್ರಾಮಾಂತರ ವ್ಯಾಪ್ತಿಯ ಆಸಕ್ತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

18-55 ವರ್ಷದೊಳಗಿನ ಮಹಿಳೆಯರಿಗೆ ಅವಕಾಶವಿರುತ್ತದೆ. ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.50 ಲಕ್ಷ ಮೀರಿರಬಾರದು ಅರ್ಜಿಯನ್ನು ಅ.31ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸ್ವೀಕಾರ ಕಟ್ಟಡ, ವಾಮಂಜೂರು, ಮಂಗಳೂರು-5750028. ದೂ.ಸಂ.: 0824-2263199 ಇಲ್ಲಿಂದ ಪಡೆಯಲು ಶಿಶುಅಭಿವೃದ್ಧಿ ಯೋಜನಾಧಿಕಾರಿ (ಗ್ರಾಮಾಂತರ) ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News