×
Ad

ಸಿಂಗಾಪುರ್ ಮಾದರಿ ಸಂಚಾರ ನಿಯಮಗಳ ಅಳವಡಿಕೆಗೆ ಚಿಂತನೆ

Update: 2018-10-23 21:32 IST

ಬೆಂಗಳೂರು, ಅ. 23: ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿವಾರಿಸುವ ಸಲುವಾಗಿ ಸಿಂಗಾಪುರ್ ಮಾದರಿಯ ಸಂಚಾರಿ ನಿಯಮಗಳನ್ನು ಅಳವಡಿಸಲು ಚಿಂತನೆ ನಡೆದಿದೆ.

ನಗರದ ಹಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಾಮಾನ್ಯವಾಗಿದೆ. ಇದರಿಂದಾಗಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ತೆರಳಲು ಸಾರ್ವಜನಿಕರು ಹೈರಾಣಾಗುತ್ತಿದ್ದು, ವಾಹನ ಸವಾರರು ತೀವ್ರ ಸಂಕಷ್ಟವನ್ನು ಎದುರಿಸುವಂತಾಗಿದೆ. ಹೀಗಾಗಿ, ಇದಕ್ಕೆ ಕಡಿವಾಣ ಹಾಕಲು ನಗರದ ಸಂಚಾರಿ ವಿಭಾಗದ ಪೊಲೀಸರು ಸಿಂಗಾಪುರ್ ಮಾದರಿಯಲ್ಲಿ ಸಂಚಾರ ನಿಯಮಗಳನ್ನು ಅಳವಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.

ಸಂಚಾರ ದಟ್ಟಣೆ ಸಮಸ್ಯೆ ತಡೆಗಟ್ಟುವ ಸಲುವಾಗಿ ನಗರದಲ್ಲಿ ಸಿಂಗಾಪುರ್, ಆಸ್ಟ್ರೇಲಿಯಾ ಮಾದರಿಯಲ್ಲಿ ಸಂಚಾರ ನಿಯಮ ಅಳವಡಿಸಿಕೊಳ್ಳಲು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹರಿಶೇಖರನ್ ಸಂಚಾರ ಸಮಸ್ಯೆ ಬಗ್ಗೆ ಅಧ್ಯಯನ ಮಾಡಲಿದ್ದಾರೆ. ಬಳಿಕ ಸಂಚಾರ ವ್ಯವಸ್ಥೆ, ಪಾರ್ಕಿಂಗ್, ರಸ್ತೆಯ ಸ್ಥಿತಿಗತಿ ಬಗ್ಗೆ ಸರಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಸರಕಾರ ವರದಿಯನ್ನು ಪರಿಶೀಲಿಸಿ ಪ್ರಾಯೋಗಿಕವಾಗಿ ವಿದೇಶಿ ಮಾದರಿ ಸಂಚಾರ ನಿಯಮಗಳನ್ನು ಜಾರಿಗೆ ತರಲಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News