×
Ad

ನಾಡಿನ ಜನತೆಗೆ ವಾಲ್ಮೀಕಿ ಜಯಂತಿಯ ಶುಭ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-10-23 21:52 IST

ಬೆಂಗಳೂರು, ಅ. 23: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಡಿನ ಜನತೆಗೆ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯವನ್ನು ಕೋರಿದ್ದಾರೆ.

ಸಾಮಾನ್ಯ ಬೇಡನೊಬ್ಬ ವಿಶ್ವಮಾನ್ಯ ಕವಿಯಾಗಿ ಮನ್ನಣೆ ಗಳಿಸುವ ಮೂಲಕ ಅವರು ಶ್ರದ್ಧೆ ಮತ್ತು ಪರಿಶ್ರಮದಿಂದ ಏನನ್ನಾದರೂ ಸಾಧಿಸಬಹುದು ಎಂಬುದಕ್ಕೆ ಅತ್ಯುತ್ತಮ ನಿದರ್ಶನ ಎಂದು ಕುಮಾರಸ್ವಾಮಿ ಇಂದಿಲ್ಲಿ ಬಣ್ಣಿಸಿದ್ದಾರೆ.

ನಮ್ಮ ಬದುಕಿನಲ್ಲಿ ಹಾಸುಹೊಕ್ಕಾಗಿರುವ ರಾಮಾಯಣದ ಆದರ್ಶಗಳನ್ನು ನಮ್ಮ ಬದುಕಿನಲ್ಲಿಯೂ ಅಳವಡಿಸಿಕೊಳ್ಳೋಣ. ಅವರು ನೀಡಿದ ರಾಮರಾಜ್ಯದ ಪರಿಕಲ್ಪನೆಯನ್ನು ಸಾಕಾರಗೊಳಿಸೋಣ ಎಂದು ಕುಮಾರಸ್ವಾಮಿ ತಮ್ಮ ಸಂದೇಶದಲ್ಲಿ ಆಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News